ಚನ್ನರಾಯಪಟ್ಟಣ: ಹತ್ತು ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ, ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಡಬ ಕೊಪ್ಪಲು ಗ್ರಾಮದ ಸುರೇಶ (22) ಬಂಧಿತ ಆರೋಪಿ. ಈತನ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿವೈಎಸ್‌ಪಿ ಬಿ.ಬಿ. ಲಕ್ಷ್ಮೇಗೌಡ ತಿಳಿಸಿದರು.

ಕಳೆದ ವಾರ ತಾಲ್ಲೂಕಿನಲ್ಲಿ ನಡೆದ ಜಾತ್ರಾ ಮಹೋತ್ಸವಕ್ಕೆ ಹೋಗಿದ್ದ ಬಾಲಕಿಗೆ ಗೊಂಬೆ ಕೊಡಿಸುವುದಾಗಿ ಆಸೆ ತೋರಿಸಿದ್ದ ಆರೋಪಿ, ಆಕೆಯನ್ನು ಕೆರೆಯಂಗಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ವೇಳೆ ಆಕೆ ಪ್ರತಿರೋಧ ವ್ಯಕ್ತಪಡಿಸಿದ್ದರಿಂದ ಉಸಿರುಗಟ್ಟಿಸಿ ಕೊಲೆ ಮಾಡಿ ಕೆರೆಗೆ ಎಸೆದು ಪರಾರಿಯಾಗಿದ್ದ. ಕಳೆದ ಸೋಮವಾರ ಬಾಲಕಿಯ ಶವ ಕೆರೆಯಲ್ಲಿ ಪತ್ತೆಯಾಗಿತ್ತು.

ದೇವಸ್ಥಾನದ ಬಳಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ ಬಾಲಕಿಯನ್ನು ಯುವಕನೋರ್ವ ಕರೆದೊಯ್ಯುತ್ತಿರುವ ದೃಶ್ಯ ಕಂಡುಬಂತು. ಆರೋಪಿಯ ಪತ್ತೆಗಾಗಿ ಸಬ್ ಇನ್‌ಸ್ಪೆಕ್ಟರ್‌ಗಳಾದ ಎಲ್.ಎನ್. ಕಿರಣ್ ಕುಮಾರ್, ಭವಿತಾ ನೇತೃತ್ವದಲ್ಲಿ ಎರಡು ತಂಡಗಳನ್ನು ರಚಿಸಲಾಗಿತ್ತು ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.