ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಸಾಯನಿಕ ಬಳಕೆ ಕಡಿಮೆ ಮಾಡಿ: ಸಚಿವೆ ಶೋಭಾ ಕರಂದ್ಲಾಜೆ

ವೈಜ್ಞಾನಿಕ ಬೆಳೆ ಪದ್ಧತಿ ಅನುಸರಿಸಿ
Last Updated 13 ಮಾರ್ಚ್ 2022, 15:34 IST
ಅಕ್ಷರ ಗಾತ್ರ

ಹಾಸನ: ‘ಕೃಷಿಯನ್ನು ಲಾಭದಾಯಕ ಉದ್ಯಮವನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವು ಯೋಜನೆ ರೂಪಿಸಿ ಶಕ್ತಿ ತುಂಬುವ ಕೆಲಸಮಾಡುತ್ತಿದೆ’ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಕಾರೇಕರೆ ಕೃಷಿ ಕಾಲೇಜು ಮೈದಾನದಲ್ಲಿ ಕೃಷಿ ಇಲಾಖೆ ವತಿಯಿಂದಏರ್ಪಡಿಸಿದ್ದ ಪ್ರಧಾನಮಂತ್ರಿ ರೈತ ಸುರಕ್ಷಾ ಫಸಲ್ ಭೀಮಾ ಯೋಜನೆಯಡಿ‘ನನ್ನ ಪಾಲಿಸಿ ನನ್ನ ಕೈಯಲ್ಲಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಕೃಷಿಕರಿಗೆ ತಮ್ಮಉತ್ಪನ್ನಗಳ ಮೌಲ್ಯವರ್ಧನೆ ಹೇಗೆ ಮಾಡಿಕೊಳ್ಳಬೇಕು ಎಂಬ ಅರಿವುಮೂಡಿಸಬೇಕು. ಸಮಗ್ರ, ಸುಸ್ಥಿರ ಬೇಸಾಯ ಹಾಗೂ ಸಾವಯವ ಪದ್ಧತಿಯಲಾಭ, ಮಾರುಕಟ್ಟೆ ಸೃಷ್ಟಿ ಮಾಡಿಕೊಳ್ಳುವುದರ ಬಗ್ಗೆ ಜಾಗೃತಿ ಮೂಡಿಸಿ ನೆರವುಒದಗಿಸಬೇಕಿದೆ’ ಎಂದು ಶೋಭಾ ಹೇಳಿದರು.

‘ಕಳೆದ ವರ್ಷ 4.5 ಲಕ್ಷ ಟನ್ ರಾಗಿ ಬೆಂಬಲ ಬೆಲೆಯಲ್ಲಿ ಖರೀದಿಸಿದ್ದು, ರೈತರ ಆದಾಯ ದ್ವಿಗುಣಗೊಳಿಸುವುದು, ಅಂತರರಾಷ್ಟ್ರೀಯ ಮಾರುಕಟ್ಟೆಒದಗಿಸಲು ಕೇಂದ್ರ ಪ್ರಯತ್ನಿಸುತ್ತಿದೆ’ ಎಂದರು.

‘ರೈತರ ಉತ್ಪಾದನೆಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು, ವೈಜ್ಞಾನಿಕ ಬೆಳೆಪದ್ಧತಿ ಅನುಸರಿಸಬೇಕು. ರಾಸಾಯನಿಕಗಳ ಬಳಕೆ ಕಡಿಮೆ ಮಾಡಬೇಕು. ಆಗರಫ್ತು ಅವಕಾಶ ಹೆಚ್ಚುತ್ತದೆ. ವಿಜ್ಞಾನಿಗಳು ಅಧಿಕಾರಿಗಳು ಈ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಸಲಹೆ ನೀಡಿದರು.

‘ಎಲ್ಲರೂ ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿ ಪ್ರಕೃತಿ ವಿಕೋಪದಿಂದಾಗುವ ನಷ್ಟತಪ್ಪಿಸಿಕೊಳ್ಳಬೇಕು ಜೊತೆಗೆ ಉತ್ಪಾದನೆ ಸಾಮರ್ಥ್ಯ ವೃದ್ಧಿಸಿಕೊಳ್ಳಬೇಕು.ಕಳೆದ ವರ್ಷ 38 ಲಕ್ಷ ಹೆಕ್ಟೇರ್ ಜಮೀನಿನಲ್ಲಿ ಸಾವಯವ ಕೃಷಿ ಮಾಡಲಾಗಿದೆ.ಇದು ರಾಜ್ಯದಲ್ಲೂ ಹೆಚ್ಚಾಗಬೇಕು. ಕೃಷಿ, ತೋಟಗಾರಿಕೆ ವಿಶ್ವವಿದ್ಯಾಲಯಗಳ ಅಧ್ಯಯನಗಳು, ಅನ್ವೇಷಣೆಗಳು ರೈತರ ಜಮೀನಿಗೂ ತಲುಪಬೇಕು’ ಎಂದುಸೂಚಿಸಿದರು.

‘ಕಡಿಮೆ ಬಡ್ಡಿ ದರದಲ್ಲಿ ಸಾಲ ಹಾಗೂ ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯ ಲಾಭಪಡೆದು ವಿದ್ಯಾವಂತ ಯುವ ಸಮುದಾಯ ಕೃಷಿ ಆಧಾರಿತ ಸ್ವ–ಉದ್ಯೋಗ ಆರಂಭಿಸಿ ಸ್ವಾವಲಂಬಿಗಳಾಗಬೇಕು’ ಎಂದು ಕರೆ ನೀಡಿದರು.

‘ಪಿ.ಎಂ ಕಿಸಾನ್ ಯೋಜನೆಯಡಿ ಜಿಲ್ಲೆಗೆ ಈ ಸಾಲಿನಲ್ಲಿ ₹ 638 ಕೋಟಿಒದಗಿಸಲಾಗಿದೆ. ಇತರೆ ಎಲ್ಲಾ ರಾಜ್ಯಗಳಲ್ಲಿ ರೈತರು ಬೆಳೆದ ಮರಗಳನ್ನುಕಡಿಯುವ ಹಕ್ಕು ಇದೆ. ಆದರೆ. ಕರ್ನಾಟಕದಲ್ಲಿ ಈ ನಿಯಮ ಬದಲಾಗಬೇಕು.
ಕೃಷಿಕರಿಗೆ ಮರದ ಹಕ್ಕು ಸಿಗಬೇಕು. ಈ ಬಗ್ಗೆ ಅರಣ್ಯ ಸಚಿವರ ಗಮನಕ್ಕೂತರಲಾಗಿದೆ’ ಎಂದು ಸಚಿವರು ತಿಳಿಸಿದರು.

ಶಾಸಕ ಪ್ರೀತಂ ಜೆ. ಗೌಡ ಮಾತನಾಡಿ, ‘ಜಿಲ್ಲೆಯ ಪ್ರಮುಖ ಬೆಳೆ ರಾಗಿಯನ್ನುಬೆಂಬಲ ಬೆಲೆಯೊಂದಿಗೆ ಖರೀದಿಸಲು ನೋಂದಣಿ ವಿಸ್ತರಣೆ ಮಾಡಬೇಕು’ ಎಂದು ಮನವಿ ಮಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕೇಂದ್ರ ಸರ್ಕಾರದ ಜಂಟಿ ಕಾರ್ಯದರ್ಶಿರಿತೇಶ್ ಚೌಹಾನ್ ಅವರು, ‘ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ’ ಪ್ರಾರಂಭದ ಉದ್ದೇಶ ಹಾಗೂ ಅನುಕೂಲಗಳ ಬಗ್ಗೆ ವಿವರಿಸಿದರು. ಜಂಟಿ ಕೃಷಿ ನಿರ್ದೇಶಕ ಕೆ.ಎಚ್. ರವಿ ಸ್ವಾಗತಿಸಿದರು. ಪ್ರಧಾನ ಮಂತ್ರಿ ಫಸಲ್ವಿಮಾ ಯೋಜನೆ ಕುರಿತು ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು.

ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಆಯುಕ್ತಬ್ರಿಜೇಶ್ ಕುಮಾರ್ ದೀಕ್ಷಿತ್, ನಿರ್ದೇಶಕಿ ಸಿ.ಎನ್. ನಂದಿನಿಕುಮಾರಿ, ಹೆಚ್ಚುವರಿಕೃಷಿ ನಿರ್ದೇಶಕ ಬಿ. ಶಿವರಾಜು, ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾಂತರಾಜು, ಪೊಲೀಸ್‌ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್‍ಗೌಡ, ಕೃಷಿ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಕೆ.ಸಿ ನಾರಾಯಣಸ್ವಾಮಿ, ಕೃಷಿ ಮಹಾವಿದ್ಯಾಲಯದ ಡೀನ್‍ಎಸ್.ಎನ್ ವಾಸುದೇವನ್, ರಾಜ್ಯ ಕೃಷಿ ಸಮಾಜದ ಪ್ರತಿನಿಧಿದೊಡ್ಡವೀರೇಗೌಡ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಕೃಷ್ಣೇಗೌಡ, ಮಡೆನೂರುಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಸ್ವತಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT