ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಗಂಗಾಧರನಾಥ ಸ್ವಾಮೀಜಿ ಅಮರ: ಶಾಸಕ ಶಿವಲಿಂಗೇಗೌಡ

ಪುಣ್ಯಾರಾಧನೆಯಲ್ಲಿ ಶಾಸಕ ಕೆ. ಎಂ. ಶಿವಲಿಂಗೇಗೌಡ
Published 13 ಜನವರಿ 2024, 11:13 IST
Last Updated 13 ಜನವರಿ 2024, 11:13 IST
ಅಕ್ಷರ ಗಾತ್ರ

ಅರಸೀಕೆರೆ: ನಾಲ್ಕು ದಶಕಗಳ ಕಾಲ ಶಿಕ್ಷಣ, ಧರ್ಮ, ಆರೋಗ್ಯ ಮತ್ತು ಸಾಮಾಜಿಕ ಸೇವೆಗಳಿಗೆ ತಮ್ಮದೇ ಆದ ಕೊಡುಗೆ ನೀಡಿದ ದೈವಾಂಶ ಸಂಭೂತರಾದ ಬಾಲಗಂಗಾಧರನಾಥ ಸ್ವಾಮೀಜಿ ಎಂದಿಗೂ ಅಮರ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು.

ಇಂದು ನಗರದಲ್ಲಿ ಭೈರವ ಯುವಕ ಸಂಘದ ವತಿಯಿಂದ ಪಿ.ಪಿ. ವೃತ್ತದಲ್ಲಿ ನಡೆದ ಬಾಲಗಂಗಾಧರನಾಥ ಸ್ವಾಮೀಜಿ ಅವರ 11ನೇ ವರ್ಷದ ಪುಣ್ಯಾರಾಧನೆಯಲ್ಲಿ  ಮಾತನಾಡಿದರು. ಭೈರವೈಕ್ಯ ಬಾಲಗಂಗಾಧರನಾಥ ಶ್ರೀಗಳು ದೈಹಿಕವಾಗಿ ಇಂದು ನಮ್ಮೊಂದಿಗೆ ಇಲ್ಲದೇ ಇದ್ದರೂ ಅವರು ಆಧ್ಯಾತ್ಮಿಕ ಕ್ಷೇತ್ರದಲ್ಲಿ ತೋರಿದ ದಾರಿ ಸಾಧನೆಗಳು ನಮ್ಮೇಲ್ಲರಿಗೂ ಆದರ್ಶವಾಗಿದೆ. ಆ ಮೂಲಕ ನಮ್ಮೊಂದಿಗೆ ಸದಾ ಇದ್ದಾರೆ ಎಂದು ಸ್ಮರಿಸಿದರು.

ತಾಲ್ಲೂಕು ಒಕ್ಕಲಿಗರ ಸಮಾಜದ ಅಧ್ಯಕ್ಷ ಆರ್. ಅನಂತ್‍ಕುಮಾರ್ ಮಾತನಾಡಿ ಅನ್ನ, ಅಕ್ಷರ, ಆರೋಗ್ಯ ಕ್ಷೇತ್ರವನ್ನು ತಮ್ಮ ಮಂತ್ರವನ್ನಾಗಿಸಿಕೊಂಡು ರೈತರಿಗೆ, ದೀನರಿಗೆ, ದಲಿತರಿಗೆ ನೀಡಿದ ಸೇವೆ ಸ್ಮರಣೀಯ ಎಂದು ಹೇಳಿದರು.

ಒಕ್ಕಲಿಗರ ಸಮಾಜದ ಮುಖಂಡರಾದ ಗಂಗಾಧರ್, ಗುಂಡಣ್ಣ, ಧರ್ಮೇಶ್, ಕೃಷ್ಣ, ಗಿರೀಶ್, ಹೈಟೆಕ್ ಕುಮಾರ್, ನಗರ ಒಕ್ಕಲಿಗರ ಶ್ರೀರಾಮ ಮಂದಿರದ ಅಧ್ಯಕ್ಷ ಹೇಮಂತ್ ಕುಮಾರ್, ನೊಣಂಬ ಲಿಂಗಾಯತ ಸಂಘದ ಜಿಲ್ಲಾಧ್ಯಕ್ಷ ಬಿ.ಜಿ ನಿರಂಜನ್, ಭೈರವ ಯುವಕ ಸಂಘದ ಪದಾಧಿಕಾರಿಗಳಾದ ಪ್ರಶಾಂತ್, ಗಣೇಶ್, ರಮೇಶ್, ಕರವೇ ನಗರ ಅಧ್ಯಕ್ಷ ಕಿರಣ್‍ಕುಮಾರ್ ಇದ್ದರು.

ಭೈರವ ಯುವಕ ಸಂಘದ ವತಿಯಿಂದ ಸಾರ್ವಜನಿಕರಿಗೆ ಉಪಹಾರವನ್ನು ವಿತರಿಸಲಾಯಿತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT