ಹಾಸನ: ಮೆಕ್ಕೆಜೋಳ ವಹಿವಾಟಿನ ಆಧಾರದ ಮೇಲೆ ರೈತರಿಗೆ ವ್ಯತ್ಯಾಸದ ಮೊತ್ತ ಪಾವತಿಗಾಗಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ನೋಂದಣಿ ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿಯಲ್ಲಿ ಮೆಕ್ಕೆಜೋಳದ ಧಾರಣೆಗೆ ನಿಯಂತ್ರಿತ ಮಾರುಕಟ್ಟೆಗಳಲ್ಲಿ ಆಗುವ ವಹಿವಾಟಿನ ಆಧಾರದ ಮೇಲೆ ರೈತರಿಗೆ ವ್ಯತ್ಯಾಸದ ಮೊತ್ತ ಪಾವತಿಸುವ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಸರ್ಕಾರದ ಆದೇಶದಂತೆ ಕ್ವಿಂಟಲ್ಗೆ ₹2,150 ಕ್ಕಿಂತ ಕಡಿಮೆ ದರದಲ್ಲಿ ಮಾರಾಟವಾದಲ್ಲಿ ವ್ಯತ್ಯಾಸದ ಮೊತ್ತ ಪಾವತಿಯ ವೇಳೆಯಲ್ಲಿ ಯಾವುದೇ ಲೋಪವಾಗದಂತೆ ಕ್ರಮ ಕೈಗೊಳ್ಳಬೇಕು. ಕೃಷಿ ಇಲಾಖೆಯಿಂದ ಗುಣಮಟ್ಟ ಪರಿಶೀಲನೆಗೆ ತಾಂತ್ರಿಕ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದರು.

ಜಿಲ್ಲೆಗೆ ನಿಗದಿಪಡಿಸಿರುವ ಮೆಕ್ಕೆಜೋಳದ ನೋಂದಣಿ ಕಾರ್ಯವನ್ನು ಬಯೋಮೆಟ್ರಿಕ್ ಆಧಾರಿತವಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಸಂಸ್ಥೆ ನಿರ್ವಹಿಸಬೇಕು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಯುಎಂಪಿ ತಂತ್ರಾಂಶದಲ್ಲಿ ದಾಖಲಾಗಿರುವ ನೋಂದಾಯಿತ ರೈತರ ಮಾರಾಟದ ದೃಢೀಕೃತ ಮಾಹಿತಿಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದವರು ಪರಿಶೀಲಿಸಿ, ಡಿಬಿಟಿ ಮೂಲಕ ವ್ಯತ್ಯಾಸದ ಮೊತ್ತವನ್ನು ರೈತರಿಗೆ ಪಾವತಿಸಲು ತಿಳಿಸಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಅರುಣ್ ಕುಮಾರ್, ಕೃಷಿ ಮಾರಾಟ ಇಲಾಖೆಯ ಉಪ ನಿರ್ದೇಶಕ ಶ್ರೀಹರಿ, ಎಪಿಎಂಸಿ ಕಾರ್ಯದರ್ಶಿ ಮಧು ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.