ಶನಿವಾರ, ಮೇ 28, 2022
25 °C
ಶಾಸಕ ಕೆ.ಎಂ.ಶಿವಲಿಂಗೇಗೌಡ ಭರವಸೆ; ಕಾರ್ಮಿಕರ ಯೋಗಕ್ಷೇಮ ವಿಚಾರಣೆ

ಅರಸೀಕೆರೆ: ಜೀತ ವಿಮುಕ್ತರಿಗೆ ಪುನರ್ವಸತಿ ಕಲ್ಪಿಸಲು ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅರಸೀಕೆರೆ: ‘ಜೀತ ವಿಮುಕ್ತರಾಗಿರುವ 55 ಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸಲು ಕಾರ್ಮಿಕ ಸಚಿವರೊಂದಿಗೆ ಚರ್ಚಿಸುತ್ತೇನೆ’ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಭರವಸೆ ನೀಡಿದರು.

ನಗರದ ಜೇನುಕಲ್ಲು ಬಡಾವಣೆಯ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಕ್ಕೆ ಶುಕ್ರವಾರ ಭೇಟಿ ನೀಡಿದ ಶಾಸಕರು, ಇಲ್ಲಿ ಆಶ್ರಯ ಪಡೆದಿರುವ ಜೀತ ವಿಮುಕ್ತ ಕಾರ್ಮಿಕರ ಯೋಗಕ್ಷೇಮ ವಿಚಾರಿಸಿ ಮಾತನಾಡಿದರು.

‘ಜೀತ ವಿಮುಕ್ತ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಿಸಲಾಗಿದೆ. ಇನ್ನು ಮುಂದೆ ತಾಲ್ಲೂಕಿನಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು’ ಎಂದು ತಾಲ್ಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆಗೆ ಸೂಚಿಸಿದರು.

‘55 ಕಾರ್ಮಿಕರೂ ಮುಗ್ಧರಿದ್ದಾರೆ. ಯಾವುದೋ ಚಟಕ್ಕೆ ಬಲಿಯಾಗಿರುವ ಇವರನ್ನು ಕೆಲವರು ತಮ್ಮ ಸ್ವಾರ್ಥ ಸಾಧನೆಗಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಘಟನೆಯ ಪ್ರಮುಖ ಆರೋಪಿಯನ್ನು ಬಂಧಿಸಬೇಕು. ಜೀತ ವಿಮುಕ್ತಿಗೊಂಡ ಕಾರ್ಮಿಕರು ತಮ್ಮ ಊರುಗಳಿಗೆ ಸುರಕ್ಷಿತವಾಗಿ ತಲುಪಲು ಅಗತ್ಯ ವ್ಯವಸ್ಥೆ ಮಾಡಬೇಕು’ ಎಂದು ತಿಳಿಸಿದರು.

ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಮಾತನಾಡಿ, ‘ಆಧುನಿಕ ಯುಗದಲ್ಲಿ ಇಂಥ ಘಟನೆಗಳು ನಡೆದಿರುವುದು ಸೋಜಿಗ. ಅವರಿಗೆ ಸೂಕ್ತ ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಬಟ್ಟೆ, ಊಟ, ವಸತಿ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯ ಗಳನ್ನು ಒದಗಿಸಲಾಗಿದೆ. ಆರೋಗ್ಯದ ಬಗ್ಗೆ ನಿಗಾ ವಹಿಸಲಾಗುತ್ತಿದೆ’ ಎಂದು ತಿಳಿಸಿದರು.

ಗ್ರೇಡ್ 2 ತಹಶೀಲ್ದಾರ್ ಪಾಲಾಕ್ಷಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಾಲಪ್ಪ, ರಾಜಸ್ವ ನಿರೀಕ್ಷಕ ಮಂಜುನಾಥ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.