ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನರಾಯಪಟ್ಟಣ: ಹನುಮ ಧ್ವಜ ತೆರವಿಗೆ ಖಂಡನೆ

Published 29 ಜನವರಿ 2024, 13:21 IST
Last Updated 29 ಜನವರಿ 2024, 13:21 IST
ಅಕ್ಷರ ಗಾತ್ರ

ಚನ್ನರಾಯಪಟ್ಟಣ: ಮಂಡ್ಯ ಜಿಲ್ಲೆ ಕೆರೆಗೋಡು ಗ್ರಾಮದಲ್ಲಿ ಹಾರಿಸಿದ್ದ ಹನುಮ ಧ್ವಜವನ್ನು ತೆರವುಗೊಳಿಸಿರುವ ಘಟನೆಯನ್ನು ಸ್ವಾಭಿಮಾನಿ ಸಾಮಾಜಿಕ ವೇದಿಕೆಯ ಕಾರ್ಯಕರ್ತರು ಖಂಡಿಸಿ ಪ್ರತಿಭಟನೆ ನಡೆಸಿದರು.

ಪಟ್ಟಣದಲ್ಲಿ ಸೋಮವಾರ ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿ ಆವರಣಕ್ಕೆ ಬಂದರು. ಸ್ವಾಭಿಮಾನಿ ಸಾಮಾಜಿಕ ವೇದಿಕೆಯ ಅಧ್ಯಕ್ಷ ಎನ್.ಆರ್. ಗಿರೀಶ್ ಮಾತನಾಡಿ, ಕೆರೆಗೋಡು ಗ್ರಾಮದಲ್ಲಿ ರಾಜಕೀಯ ದುರುದ್ದೇಶದಿಂದ ಹನುಮ ಧ್ವಜವನ್ನು ತೆರವುಗೊಳಿಸುವ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತರಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಇಂಥ ಘಟನೆ ಮರುಕಳಿಸುತ್ತಿವೆ. ಏಕಪಕ್ಷೀಯವಾಗಿ ನಡೆದುಕೊಳ್ಳುವುದನ್ನು ಸಹಿಸುವುದಿಲ್ಲ. ಅದೇ ರೀತಿ ಭಾನುವಾರ ಚಿತ್ರದುರ್ಗದಲ್ಲಿ ಏರ್ಪಡಿಸಿದ್ದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕುರಿತು ಏಕವಚನ ಬಳಕೆ ಮಾಡಿದ್ದು ಸರಿಯಲ್ಲ ಎಂದು ದೂರಿದರು.

ತಹಶೀಲ್ದಾರ್ ಬಿ.ಎಂ. ಗೋವಿಂದರಾಜು ಅವರಿಗೆ ಮನವಿ ಸಲ್ಲಿಸಲಾಯಿತು. ಸ್ವಾಭಿಮಾನಿ ಸಾಮಾಜಿಕ ವೇದಿಕೆಯ ಖಜಾಂಚಿ ಡಿ.ಎಂ. ರವಿ, ಮುಖಂಡರಾದ ವಿದ್ಯಾಪ್ರಸಾದ್, ನಂಜುಂಡಮೈಮ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT