ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿವೃಷ್ಟಿ, ಶೀಘ್ರ ಸಿ.ಎಂಗೆ ವರದಿ ಸಲ್ಲಿಕೆ: ಕೆ.ಗೋಪಾಲಯ್ಯ

ಜಿಲ್ಲೆಯಲ್ಲಿ 184 ಭಾಗಶಃ, 22 ಮನೆ ಸಂಪೂರ್ಣ ಹಾನಿ: ಸಚಿವ ಗೋಪಾಲಯ್ಯ
Last Updated 6 ಆಗಸ್ಟ್ 2021, 14:19 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಕಳೆದ ವಾರ ಸುರಿದ ಭಾರೀ ಮಳೆಯಿಂದ ಅಪಾರ ಆಸ್ತಿ–ಪಾಸ್ತಿ ನಷ್ಟ ಉಂಟಾಗಿದೆ. ನಷ್ಟದ ಅಂದಾಜು ಪಟ್ಟಿ ಸಿದ್ಧಪಡಿಸುತ್ತಿದ್ದು, ಮುಂದಿನ ಕ್ಯಾಬಿನೆಟ್‌ ಸಭೆಯಲ್ಲಿ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಅವರಿಗೆ ವರದಿ ಸಲ್ಲಿಸಲಾಗುವುದು ಎಂದು ಸಚಿವ ಕೆ.ಗೋಪಾಲಯ್ಯ ಹೇಳಿದರು.

ಕೆರೆ, ಸೇತುವೆ, ಶಾಲೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಅಂಗನವಾಡಿ ಕಟ್ಟಡಗಳಿಗೆ ಹಾನಿ ಆಗಿದೆ. ತಾಲ್ಲೂಕುಗಳಿಂದ ವರದಿ ಸಲ್ಲಿಸಲಾಗಿದೆ. 80.54ಕಿ.ಮೀ ರಾಜ್ಯ ಹೆದ್ದಾರಿ, 143.3 ಕಿ.ಮೀ ಗ್ರಾಮೀಣ ರಸ್ತೆಗಳು, 436 ವಿದ್ಯುತ್ಕಂಬಗಳು ನೆಲಕ್ಕೆ ಉರುಳಿದ್ದು, ಒಂದು ಟ್ರಾನ್ಸಫಾರ್ಮರ್‌ ಹಾನಿಯಾಗಿದೆ. ದುರಸ್ತಿ
ಕಾರ್ಯ ಪ್ರಗತಿಯಲ್ಲಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

184 ಮನೆಗಳು ಭಾಗಶಃ, 22 ಮನೆಗಳಿಗೆ ಸಂಪೂರ್ಣ ಹಾನಿ ಉಂಟಾಗಿದೆ. 151ಮನೆಗಳಿಗೆ ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ. ಸಂಪೂರ್ಣ ಹಾನಿಯಾದಮನೆಗೆ ₹ 5 ಲಕ್ಷ ನೀಡಲಾಗುವುದು. ಮನೆ ನಿರ್ಮಿಸಿಕೊಳ್ಳಲು ಮೊದಲ ಕಂತಿನ ಹಣಬಿಡುಗಡೆ ಮಾಡಲಾಗಿದೆ. ಹಂತ ಹಂತವಾಗಿ ಉಳಿದ ಹಣ ನೀಡಲಾಗುವುದು ಎಂದರು.

ಕೋವಿಡ್‌ ಮೂರನೇ ಅಲೆ ಹರಡದಂತೆ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲುಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಗಡಿ ಭಾಗದಲ್ಲಿ ಚೆಕ್‌ಪೋಸ್ಟ್‌ ಸ್ಥಾಪನೆಸೇರಿದಂತೆ ಕೋವಿಡ್‌ ಮೊದಲ ಅಲೆ ಸಂದರ್ಭದಲ್ಲಿ ತೆಗೆದುಕೊಂಡ ಕ್ರಮಗಳನ್ನುಈಗಲೂ ಮುಂದುವರೆಸಲಾಗುವುದು ಎಂದರು.

ಹಿಮ್ಸ್‌ ಆಸ್ಪತ್ರೆಯಲ್ಲಿ 200 ಹಾಸಿಗೆಯ ಮಕ್ಕಳ ವಾರ್ಡ್ ಸಿದ್ಧಪಡಿಸಲಾಗಿದೆ. ಎಲ್ಲಾತಾಲ್ಲೂಕುಗಳಲ್ಲೂ ಆಮ್ಲಜನಕ ಘಟಕ ಸ್ಥಾಪನೆ ಮಾಡಲಾಗುವುದು. ಆಮ್ಲಜನಕ ಕೊರತೆಉಂಟಾಗದಂತೆ ಹೆಚ್ಚುವರಿಯಾಗಿ 400 ಆಮ್ಲಜನಕ ಸಿಲಿಂಡರ್‌ಗಳನ್ನುಖರೀದಿಸಲಾಗಿದೆ ಎಂದು ತಿಳಿಸಿದರು.

ದೇಶದಲ್ಲಿ ಕೋವಿಡ್‌ ಲಸಿಕೆ ಕೊರತೆ ಉಂಟಾಗಿದೆ. ಜಿಲ್ಲೆಯಲ್ಲಿಯೂ ನಿತ್ಯ 100ಕ್ಕೂಹೆಚ್ಚು ಜನರಿಗೆ ಕೊರೊನಾ ಪಾಸಿಟಿವ್‌ ಬರುತ್ತಿದೆ. ಹಾಗಾಗಿ ಆದ್ಯತೆ ಮೇರೆಗೆ ಜಿಲ್ಲೆಗೆಹೆಚ್ಚುವರಿಯಾಗಿ ಲಸಿಕೆ ನೀಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗುವುದುಎಂದರು.

ಹೇಮಾವತಿ ಜಲಾಶಯ ಯೋಜನೆ (ಎಚ್‌ಆರ್‌ಪಿ) ಸಂತ್ರಸ್ತರ ಪುನರ್ವಸತಿಗಾಗಿಮೀಸಲಿಟ್ಟ ಸಾವಿರಾರು ಎಕರೆ ಭೂಮಿಯನ್ನು ಅಕ್ರಮವಾಗಿ ಹಂಚಿಕೆ ಮಾಡಿರುವಹಗರಣದ ಬಗ್ಗೆ ಐಎಎಸ್‌ ಅಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಅಧಿಕಾರಿಗಳುಸೇರಿದಂತೆ ಎಷ್ಟೇ ದೊಡ್ಡ ವ್ಯಕ್ತಿಗಳಿದ್ದರೂ ಕಾನೂನು ಪ್ರಕಾರ ಕೈಗೊಳ್ಳಲಾಗುವುದು. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಗೋಪಾಲಯ್ಯ ಹೇಳಿದರು.

ಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಬಿ.ಎ.ಪರಮೇಶ್‌, ಪೊಲೀಸ್‌ ವರಿಷ್ಠಾಧಿಕಾರಿ ಆರ್‌.ಶ್ರೀನಿವಾಸ್‌ಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT