ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಆಗ್ರಹ

ನಗರದಲ್ಲಿ ವಕೀಲರ ಮೆರವಣಿಗೆ ; ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಕೆ
Last Updated 28 ಜನವರಿ 2022, 16:40 IST
ಅಕ್ಷರ ಗಾತ್ರ

ಹಾಸನ: ‘ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರ ವಿರುದ್ಧದೇಶದ್ರೋಹ ಪ್ರಕರಣ ದಾಖಲಿಸಿ ಕೂಡಲೇ ಸೇವೆಯಿಂದ ಅಮಾನತುಗೊಳಿಸಿಕಾನೂನು ಕ್ರಮ ಕೈಗೊಳ್ಳಬೇಕು’ ಎಂದು
ಆಗ್ರಹಿಸಿ ಶುಕ್ರವಾರ ವಕೀಲರು ಕಲಾಪದಿಂದ ಹೊರಗುಳಿದು ಧರಣಿ ನಡೆಸಿದರು.

ನಗರದ ಹೊಸ ಕೋರ್ಟ್‌ ಆವರಣದಿಂದ ಶುಕ್ರವಾರ ಮೆರವಣಿಗೆ ಮೂಲಕಎನ್‌.ಆರ್.ವೃತ್ತಕ್ಕೆ ಬಂದು ಮಾನವ ಸರಳಿ ರಚಿಸಿ, ನ್ಯಾಯಾಧೀಶರ ವಿರುದ್ಧ ಘೋಷಣೆಕೂಗಿದರು. ಬಳಿಕ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ಬಂದು ಕೆಲ ಕಾಲ ಧರಣಿ ನಡೆಸಿದರು.

ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಮೂರ್ತಿ ಮಾತನಾಡಿ,‘ರಾಯಚೂರಿನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಏರ್ಪಡಿಸಿದ್ದಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್‌ ಭಾವಚಿತ್ರ ತೆಗೆಸಿ‌ ಅಪಮಾನ ಮಾಡಿದ್ದಾರೆ. ನ್ಯಾಯದ ಪರವಾಗಿ ತೀರ್ಪು ನೀಡುವವರೇ ಈ ರೀತಿ ಸಂವಿಧಾನ ವಿರೋಧಿಯಾಗಿ ನಡೆದುಕೊಂಡಿರುವುದು ಖಂಡನೀಯ. ಇವರ ವಿರುದ್ಧ ಹೈಕೋರ್ಟ್‌ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ವಕೀಲ ಅರೇಹಳ್ಳಿ ರಾಜು ಮಾತನಾಡಿ, ‘ಮಲ್ಲಿಕಾರ್ಜುನ ಗೌಡ ಅವರ ಮನಸ್ಥಿತಿ ಕೀಳು ಮಟ್ಟದಿಂದ ಕೂಡಿದ್ದು, ಇದು ಅಂಬೇಡ್ಕರ್ ಅವರಿಗೆ ಮಾಡಿದ ಅಪಮಾನವಾಗಿದೆ’ ಎಂದು ದೂರಿದರು.

ಬಳಿಕ ಜಿಲ್ಲಾಧಿಕಾರಿ ಆರ್‌.ಗಿರೀಶ್ ಮೂಲಕ ರಾಜ್ಯಪಾಲರು ಮತ್ತು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರಿಗೆ ಮನವಿ ಸಲ್ಲಿಸಲಾಯಿತು. ನಂತರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಧರಣಿ ಅಂತ್ಯಗೊಳಿಸಿದರು.

ಪ್ರತಿಭಟನೆಯಲ್ಲಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಕೆ. ಮೋಹನ್ ಕುಮಾರ್,ಖಜಾಂಚಿ ನಾಗೇಂದ್ರ ಕುಮಾರ್, ಉಪಾಧ್ಯಕ್ಷ ಎಚ್.ಆರ್. ರಂಗನಾಥ್, ಜಂಠಿಕಾರ್ಯದರ್ಶಿ ತುಳಸಿ ಶ್ರೀನಿವಾಸ್, ಮಾಜಿ
ಅಧ್ಯಕ್ಷ ದೇವರಾಜೇಗೌಡ, ಸದಸ್ಯರಾದರಾಜು, ಕ್ರಾಂತಿ ಪ್ರಸಾದ್, ರಾಜೇಶ್ ಇದ್ದರು.

ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಣೆ

ಅರಕಲಗೂಡು: ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರ ತೆಗೆಸಿರುವುದನ್ನು ಖಂಡಿಸಿ ಪಟ್ಟಣದಲ್ಲಿ ಕಂದಾಯ ಇಲಾಖೆ ನೌಕರರು ಶುಕ್ರವಾರ ಕೈಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವ ಮೂಲಕ ಪ್ರತಿಭಟಿಸಿದರು.

ತಾಲ್ಲೂಕು ಕಂದಾಯ ಇಲಾಖೆ ನೌಕರರ ಸಂಘದ ಉಪಾಧ್ಯಕ್ಷ ಸಿ. ಸ್ವಾಮಿ ಮಾತನಾಡಿ, ಕೆಟ್ಟ ಮನಸ್ಥಿತಿಯುಳ್ಳ ಮಲ್ಲಿಕಾರ್ಜುನ ಗೌಡ ಹಾಗೂ ಅಲ್ಲಿನ ಸಿಬ್ಬಂದಿ ವಿರುದ್ದ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಿ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕಿದೆ ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ತಹಸೀಲ್ದಾರ್ ಕೆ.ಆರ್. ಶ್ರೀನಿವಾಸ್ ಮಾತನಾಡಿ, ಈ ವಿಚಾರವಾಗಿ ಸರ್ಕಾರ ಈಗಾಗಲೇ ವಿಚಾರಣೆ ಕೈಗೊಂಡಿದೆ. ಮಾನ್ಯ ಜಿಲ್ಲಾಧಿಕಾರಿಗಳ ಮೂಲ ಸರ್ಕಾರಕ್ಕೆ ಮನವಿ ಕಳಿಸಿಕೊಡುವುದಾಗಿ ತಿಳಿಸಿದರು.

ತಾಲ್ಲೂಕು ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಶಿವಕುಮಾರ್, ಶಿರೆಸ್ತೇದಾರರಾದ ನಂಜೇಗೌಡ, ಅಂಕೇಗೌಡ, ಭಾನುಪ್ರಕಾಶ್, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT