ಮಂಗಳವಾರ, ಅಕ್ಟೋಬರ್ 19, 2021
24 °C

ಪೌರಾಯುಕ್ತ, ಸಿಬ್ಬಂದಿ ಮೇಲಿನ ಹಲ್ಲೆಗೆ ರೈತ ಸಂಘ ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ನಗರಸಭೆ ಪೌರಾಯುಕ್ತ ಕೃಷ್ಣಮೂರ್ತಿ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕೋವಿಡ್‌ ಸಂದರ್ಭದಲ್ಲಿ ಪೌರಾಯುಕ್ತ ಹಾಗೂ ಸಿಬ್ಬಂದಿ ಹಗಲಿರುಳು ಶ್ರಮಿಸಿದ್ದರು. ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಕೋವಿಡ್‌ ಲಸಿಕಾ ಕೇಂದ್ರವನ್ನು ಬಂದ್ ಮಾಡಿದ್ದನ್ನು ಪ್ರಶ್ನಿಸಿದಕ್ಕೆ ಯತೀಂದ್ರ ಪ್ಯಾರಾ ಮೆಡಿಕಲ್‌ ಕಾಲೇಜು ಆಡಳಿತ ಮಂಡಳಿ ಹಾಗೂ ಮಾಲೀಕರು ಪೌರಾಯುಕ್ತ ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ರಸ್ತೆಯಲ್ಲೇ ಎಳೆದಾಡಿರುವುದು ಖಂಡನೀಯ ಎಂದರು. 

ಶಿಕ್ಷಣ ಸಂಸ್ಥೆ ಮಾಲೀಕರು ಈ ರೀತಿ ವರ್ತಿಸಿರುವುದು ಸರಿಯಲ್ಲ. ಘಟನೆ ಸಂಬಂಧ ಯತೀಂದ್ರ ಶಿಕ್ಷಣ ಸಂಸ್ಥೆ ಮಾಲೀಕರಾದ ನಾರಾಯಣ, ಪದ್ಮಾ ದಂಪತಿ ಹಾಗೂ ಅವರ ಮಕ್ಕಳಾದ ಸುಜಿತ್‌, ಡಾ.ಸ್ವರೂಪ್‌ ಅವರ ವಿರುದ್ಧ ನಗರ ಪೆನ್ಷನ್‌ ಮೊಹಲ್ಲಾ ಠಾಣೆಯಲ್ಲಿ ಎಫ್‌ ಐಆರ್‌ ದಾಖಲಾಗಿದೆ. ಕೂಡಲೇ ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಬಾಬು, ಮಹಿಳಾ ಘಟಕದ ಅಧ್ಯಕ್ಷೆ ಗೌರಮ್ಮ, ಮುಖಂಡರಾದ ಕೃಷ್ಣ, ವಿಠಲ್, ಗೀತಾ, ರಂಗಮ್ಮ, ಮಲ್ಲಿಗೆಮ್ಮ, ಜಗದೀಶ್, ನಾಗರಾಜು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು