ಶನಿವಾರ, ಸೆಪ್ಟೆಂಬರ್ 25, 2021
29 °C

ವೈಜ್ಞಾನಿಕ ಬೆಲೆ; ಡಿ.ಸಿ ಕಚೇರಿ ಎದುರು ಭಾರತೀಯ ಕಿಸಾನ್‌ ಸಂಘ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ಘೋಷಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ
ಕರ್ನಾಟಕ ಪ್ರದೇಶ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ
ನಡೆಸಲಾಯಿತು.

ರೈತ ಕಷ್ಟಪಟ್ಟು ಬೆಳೆ ಬೆಳೆದರೂ ಸರಿಯದ ಬೆಲೆ ಸಿಗುತ್ತಿಲ್ಲ. ಕಳೆದ ಕೆಲವು ವರ್ಷಗಳಿಗೆ ಹೋಲಿಸಿದರೆ ಎಲ್ಲಾ
ವಸ್ತುಗಳ ಬೆಲೆ ಏರಿಕೆಯಾಗಿದೆ. ಆದರೆ, ರೈತ ಮಾತ್ರ ಮತ್ತಷ್ಟು ನಷ್ಟಕ್ಕೆ ಒಳಗಾಗುತ್ತಿರುವುದರಿಂದ
ಆತ್ಮಹತ್ಯೆಗಳು ಹೆಚ್ಚು ನಡೆಯುತ್ತಿವೆ. ಸರ್ಕಾರ ಘೋಷಣೆ ಮಾಡುವ ಯಾವುದೇ ಸಬ್ಸಿಡಿಗಳು, ಯೋಜನೆಗಳು
ಸರಿಯಾಗಿ ಸಿಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ದೇಶದಲ್ಲಿ ಶೇಕಡಾ 70 ರಷ್ಟು ಕೃಷಿಕರಿದ್ದರೂ ಕೃಷಿಯಲ್ಲಿ ಲಾಭ ಗಳಿಸಲು ಸಾಧ್ಯವಾಗುತ್ತಿಲ್ಲ. ಇದೇ ಪರಿಸ್ಥಿತಿ
ಮುಂದುವರೆದರೆ ಕೃಷಿ ಕ್ಷೇತ್ರ ಅವನತಿ ಹೊಂದಿ ಆಹಾರದ ಅಭಾವ ಉಂಟಾಗುವ ಸಾಧ್ಯತೆ ಇದೆ. ಈ ವ್ಯವಸ್ಥೆ
ಸರಿಯಾಗಬೇಕಾದರೆ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್‌.ಪಿ) ಬದಲು ವೈಜ್ಞಾನಿಕ ಬೆಲೆ
ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಭಾರತೀಯ ಕಿಸಾನ್‌ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಕಾಳೇಗೌಡ, ಪ್ರಾಂತ ಸಂಘಟನಾ
ಕಾರ್ಯದರ್ಶಿ ಕೆ.ಎನ್‌. ನಾರಾಯಣಸ್ವಾಮಿ, ಆಲೂರು ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಬಿ. ಮಲ್ಲಪ್ಪ,
ಮುಖಂಡರಾದ ರಾಜು, ಕುಮಾರಸ್ವಾಮಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು