ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಹಾಸ್ಟೆಲ್‌ ಆರಂಭಿಸಲು ಒತ್ತಾಯ

ಎಬಿವಿಪಿ ನೇತೃತ್ವದಲ್ಲಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಕೆ
Last Updated 20 ಜುಲೈ 2021, 13:22 IST
ಅಕ್ಷರ ಗಾತ್ರ

ಹಾಸನ: ಸರ್ಕಾರ ಕೂಡಲೇ ಹಾಸ್ಟೆಲ್‌ಗಳನ್ನು ಪ್ರಾರಂಭಿಸಬೇಕು ಹಾಗೂ ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ಒದಗಿಸಬೇಕು ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ.

ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳವಾರ ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜರಾಂ ಅವರಿಗೆ ಮನವಿ ಸಲ್ಲಿಸಿ, ಕೋವಿಡ್‌ ಎರಡನೇ ಅಲೆಯ ಕಾರಣದಿಂದ ರಾಜ್ಯದ ಎಲ್ಲಾ ಹಾಸ್ಟೆಲ್‌ಗಳು ಸೇರಿದಂತೆ ಶಾಲೆ, ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು. ಪ್ರಸ್ತುತ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ತರಗತಿಗಳನ್ನು ಆರಂಭಿಸುವಂತೆ ಸಲಹೆ ನೀಡಿರುವುದು ಒಳ್ಳೆಯ ಬೆಳವಣಿಗೆ ಎಂದು ತಿಳಿಸಿದ್ದಾರೆ.

ರಾಜ್ಯದ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲ್‌ಗಳನ್ನುಅವಲಂಬಿಸಿದ್ದಾರೆ. ರಾಜ್ಯದ ಹಿಂದುಳಿದ ವರ್ಗ, ಸಮಾಜ ಕಲ್ಯಾಣ ಮತ್ತುಅಲ್ಪಸಂಖ್ಯಾತರ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲಾ ಹಾಸ್ಟೆಲ್‌ಗಳನ್ನು ಮುಂಜಾಗ್ರತ ಕ್ರಮ ಕೈಗೊಂಡು, ಸ್ಯಾನಿಟೈಸ್‌ ಮಾಡಿಸಿ ಪ್ರಾರಂಭಿಸುವ ಮೂಲಕ ವಿದ್ಯಾರ್ಥಿಗಳುಉಳಿದುಕೊಳ್ಳಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಕೋವಿಡ್‌ ಮಾರ್ಗಸೂಚಿ ಗಮನದಲ್ಲಿಟ್ಟುಕೊಂಡು ಹಾಸ್ಟೆಲ್‌ಗಳಲ್ಲಿ ತಂಗುವವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಮೊದಲ ಆದ್ಯತೆ ನೀಡಲು ಕ್ರಮ ಕೈಗೊಳ್ಳಬೇಕು.ಕಾಲೇಜುಗಳಲ್ಲಿ ಶೈಕ್ಷಣಿಕ ಚಟುಚಟಿಕೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತಕ್ಷಣ ಬಸ್‌ ಪಾಸ್‌ ಸೌಲಭ್ಯ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಸಾಯಿ ಐಶ್ವರ್ಯಾ ಶೆಟ್ಟಿ, ಕಾರ್ಯಕರ್ತರಾದ ಚಂದನಾ, ಡಿ.ಆರ್‌. ಲಾವಣ್ಯ, ಎಚ್‌.ಕೆ.ನಿಸರ್ಗ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT