ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಾಯುಕ್ತ ಸಂಸ್ಥೆ ಬಲಪಡಿಸಲು ಆಗ್ರಹ

ಜಿಲ್ಲಾಧಿಕಾರಿ ಕಚೇರಿ ಎದುರು ಏಕಾಂಗಿ ಧರಣಿ
Last Updated 13 ಜುಲೈ 2021, 14:06 IST
ಅಕ್ಷರ ಗಾತ್ರ

ಹಾಸನ: ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಲೋಕಾಯುಕ್ತ ಸಂಸ್ಥೆಗೆ ಸಂಪೂರ್ಣ ಅಧಿಕಾರ ನೀಡಬೇಕು ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಎಚ್.ಜಿ.ವೀರಭದ್ರಪ್ಪ ಮಂಗಳವಾರಜಿಲ್ಲಾಧಿಕಾರಿ ಕಚೇರಿ ಎದುರು ಏಕಾಂಗಿ ಧರಣಿ ನಡೆಸಿದರು.

ರಾಜ್ಯದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಲು 1987 ರಲ್ಲಿ ಅಂದಿನ ಮುಖ್ಯಮಂತ್ರಿ ರಾಮಕೃಷ್ಣ
ಹೆಗ್ಗಡೆ ಅವರು ಕರ್ನಾಟಕ ಲೋಕಾಯುಕ್ತ ಸಂಸ್ಥೆ ಸ್ಥಾಪನೆ ಮಾಡಿದ್ದರು. ಸೀಮಿತ ಅಧಿಕಾರದಲ್ಲಿಯೇ ಭ್ರಷ್ಟ ಅಧಿಕಾರಿಗಳಿಗೆ ಸಂಸ್ಥೆ ಅಂಕುಶ ಹಾಕಿತ್ತು. ನಂತರ 2013 ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ
ಸಂಸ್ಥೆಗೆ ನೀಡಿದ್ದ ಅಧಿಕಾರ ಮೊಟಕುಗೊಳಿಸಿತು ಎಂದು ದೂರಿದರು.

2018ರ ಚುನಾವಣಾ ಪ್ರಚಾರ ಸಭೆಯಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರು ಬಿಜೆಪಿ ಅಧಿಕಾರಕ್ಕೆ ಬಂದರೆ ಲೋಕಾಯುಕ್ತ ಸಂಸ್ಥೆಗೆ ಹೆಚ್ಚಿನ ಅಧಿಕಾರ ನೀಡುವುದಾಗಿ ಭರವಸೆನೀಡಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ ಸಂಸ್ಥೆಗೆ ಹೆಚ್ಚಿನಅಧಿಕಾರ ನೀಡಿಲ್ಲ. ಇದರಿಂದ ರಾಜ್ಯದ ಜನರಿಗೆ ವಂಚಿಸಿ ವಚನ ಭ್ರಷ್ಟರಾಗಿದ್ದಾರೆ ಎಂದುಆರೋಪಿಸಿದರು.

ಕೂಡಲೇ ಲೋಕಾಯುಕ್ತ ಸಂಸ್ಥೆಗೆ ಹೆಚ್ಚಿನ ಅಧಿಕಾರ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT