ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶಿಷ್ಟರ ಸಮಸ್ಯೆ ಸಕಾಲದಲ್ಲಿ ಪರಿಹರಿಸಿ: ಆರ್‌.ಗಿರೀಶ್‌ ಸೂಚನೆ

ಜಿಲ್ಲಾ ಮಟ್ಟದ ಜಾಗೃತಿ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಸೂಚನೆ
Last Updated 28 ಡಿಸೆಂಬರ್ 2021, 16:21 IST
ಅಕ್ಷರ ಗಾತ್ರ

ಹಾಸನ: ‘ಪರಿಶಿಷ್ಟರ ಸಮುದಾಯದ ಸಮಸ್ಯೆಗಳನ್ನು ಸಕಾಲದಲ್ಲಿ ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸ್ಪಂದಿಸಿ ಕಾಳಜಿ ವಹಿಸಿ ಕೆಲಸ ಮಾಡಬೇಕು’ ಎಂದು ಜಿಲ್ಲಾಧಿಕಾರಿಆರ್.ಗಿರೀಶ್ ಸೂಚಿಸಿದರು.

ನಗರದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಭೂ
ಮಂಜೂರಾತಿ, ಹಕ್ಕುಪತ್ರ ಹಾಗೂ ಇತರೆ ಸೌಲಭ್ಯವಿತರಣೆ ಕಾರ್ಯಗಳು ವಿಳಂಬವಾಗುತ್ತಿದ್ದು, ಕಾಲಮಿತಿಯೊಳಗೆ ಅವುಗಳನ್ನು ಒದಗಿಸಿ ಎಂದುನಿರ್ದೇಶನ ನೀಡಿದರು.

ವಸತಿ ರಹಿತರು, ಜೀತ ವಿಮುಕ್ತರಿಗೆ ಆದಷ್ಟು ಶೀಘ್ರ ಪುನರ್ವಸತಿ ಕಲ್ಪಿಸಬೇಕಿದ್ದು, ಸೂಕ್ತ ಜಾಗ ಗುರುತಿಸಬೇಕಾಗಿದೆ. ಅದಕ್ಕಾಗಿ ದೊಡ್ಡಮಟ್ಟದಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿರುವ ಪ್ರಕರಣಗಳನ್ನು ಪತ್ತೆ ಮಾಡಿ, ತೆರವುಗೊಳಿಸಿ ಜಮೀನು ಒದಗಿಸಲು ಪ್ರಯತ್ನ ಮಾಡಬೇಕು ಎಂದು ಸಮಿತಿ ಸದಸ್ಯರಾದ ಮರಿ ಜೋಸೆಫ್, ವಿಜಯಕುಮಾರ್, ಈರಪ್ಪ, ಕೃಷ್ಣದಾಸ್, ನಾರಾಯಣದಾಸ್, ಹೂರಾಜ್ ಮನವಿ ಮಾಡಿದರು.ಈ ಬಗ್ಗೆ ಪರಿಶೀಲಿಸಿ ವರದಿ ಪಡೆದು ಕ್ರಮವಹಿಸುವುದಾಗಿ ಜಿಲ್ಲಾಧಿಕಾರಿ ಹೇಳಿದರು.

ಪಿ.ಟಿ.ಸಿ.ಎಲ್ ಪ್ರಕರಣಗಳ ಬಗ್ಗೆ ತ್ವರಿತ ವಿಚಾರಣೆ ನಡೆಸಿ ವಿಲೇವಾರಿ ಮಾಡಲು ಸೂಚನೆ ನೀಡಲಾಗುವುದು. ಅದೇ ರೀತಿ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳಿಗೆ ಶೀಘ್ರವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಎಚ್‌ಆರ್‌ಪಿ ನಿರಾಶ್ರಿತರಿಗೆ ಆದಷ್ಟು ಬೇಗ ಹಕ್ಕುಪತ್ರ ನೀಡಬೇಕು ಹಾಗೂ ಇತರಯೋಜನೆಗಳಡಿ ಭೂಸ್ವಾಧೀನಗೊಂಡ ಪ್ರಕರಣಗಳಿಗೆ ತ್ವರಿತವಾಗಿ ಪರಿಹಾರ ನೀಡಬೇಕುಎಂದರು.

ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿ ದೂರ ಇರುವ ಕಾರಣಸಾರ್ವಜನಿಕರ ಅನುಕೂಲದ ದೃಷ್ಟಿಯಿಂದ ನಿತ್ಯ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಗರದ ಅಂಬೇಡ್ಕರ್ ಭವನದಲ್ಲಿ ಕಾರ್ಯನಿರ್ವಹಿಸುವಂತೆ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ ಮಾತನಾಡಿ, ದಲಿತರ ಮೇಲಿನದೌರ್ಜನ್ಯ ಪ್ರಕರಣಗಳಿಗೆ ಶೀಘ್ರವಾಗಿ ನ್ಯಾಯ ಒದಗಿಸಲು ಪ್ರಯತ್ನ ನಡೆಸಲಾಗುತ್ತಿದೆ. ಕಾಲಕಾಲಕ್ಕೆ ತಮ್ಮ ಕಚೇರಿಯಲ್ಲಿ ಸಭೆ ನಡೆಸುತ್ತಿದ್ದು, ಎಲ್ಲಾ ರೀತಿಯ ನೆರವು ನೀಡಲಾಗುತ್ತಿದೆಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಾಂತರಾಜ್ ಮಾತನಾಡಿ, ಇ ಸ್ವತ್ತು ಮತ್ತು ಇತರೆ ಸಮಸ್ಯೆಗಳನ್ನು ಬಗೆಹರಿಸಲು ಗ್ರಾಮ ಪಂಚಾಯಿತಿಗಳಿಗೆ ಸೂಚನೆ ನೀಡಲಾಗುವುದು. ಗ್ರಾಮೀಣ ಪ್ರದೇಶಗಳಲ್ಲಿ, ಅಂಗ
ಡಿಗಳಲ್ಲಿ ಅಕ್ರಮವಾಗಿ ನಡೆಯುತ್ತಿರುವ ಮದ್ಯ ಮಾರಾಟ ಸಂಪೂರ್ಣವಾಗಿ ನಿಯಂತ್ರಿಸುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ಪರಿಶಿಷ್ಟ ಸಮುದಾಯಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಸಮಿತಿ ಸದಸ್ಯರು ವಿವರಿಸಿದರು. ವಿಶೇಷ ಭೂಸ್ವಾಧೀನಾಧಿಕಾರಿ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆಯಉಪ ನಿರ್ದೇಶಕ ಮಂಜುನಾಥ್, ಅಬಕಾರಿ ಇಲಾಖೆ ಉಪ ಆಯುಕ್ತ ನಾಗೇಶ್, ಆಹಾರ ಮತ್ತುನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ದೇವರಾಜ್, ತಹಶೀಲ್ದಾರ್ ನಟೇಶ್ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT