ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಳೆನರಸೀಪುರಕ್ಕೆ ಬರದ ರೇವಣ್ಣ: ಮೈಸೂರಿಗೆ ಪ್ರಯಾಣ

Published 21 ಮೇ 2024, 14:09 IST
Last Updated 21 ಮೇ 2024, 14:09 IST
ಅಕ್ಷರ ಗಾತ್ರ

ಹಾಸನ: ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಜಾಮೀನು ಪಡೆದ ನಂತರ ಮೊದಲ ಬಾರಿಗೆ ಮಂಗಳವಾರ ಜಿಲ್ಲೆಗೆ ಭೇಟಿ ನೀಡಲಿದ್ದ ಶಾಸಕ ಎಚ್‌.ಡಿ. ರೇವಣ್ಣ ಕೊನೆಯ ಕ್ಷಣದಲ್ಲಿ ತಮ್ಮ ಪ್ರವಾಸವನ್ನು ಬದಲಾಯಿಸಿದರು.

ಬೆಂಗಳೂರಿನಿಂದ ರಸ್ತೆ ಮೂಲಕ ಜಿಲ್ಲೆಯ ಹಿರೀಸಾವೆ ಹೋಬಳಿಯ ಕಿರೀಸಾವೆಗೆ ಬಂದ ಅವರನ್ನು ಕಾರ್ಯಕರ್ತರು, ಮುಖಂಡರು ಸ್ವಾಗತಿಸಿದರು. ಅಲ್ಲಿಂದ ಅವರು ಹೊಳೆನರಸೀಪುರಕ್ಕೆ ತೆರಳಿ, ಮನೆ ದೇವರಿಗೆ ಪೂಜೆ ಸಲ್ಲಿಸುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ಅವರು ಮೈಸೂರಿಗೆ ಪ್ರಯಾಣ ಬೆಳೆಸಿದರು.

ರೇವಣ್ಣ ಅವರನ್ನು ಸ್ವಾಗತಿಸಲು ಹೊಳೆನರಸೀಪುರದಲ್ಲಿ ಸಜ್ಜಾಗಿದ್ದ ಸಾವಿರಾರು ಕಾರ್ಯಕರ್ತರು ಹಾಗೂ ಮುಖಂಡರು, ನಿರಾಸೆಯಿಂದ ಮನೆಗೆ ವಾಪಸ್ ತೆರಳಿದರು. ಅವರ ಬರುವಿಕೆ ಹಿನ್ನೆಲೆಯಲ್ಲಿ ಹೊಳೆನರಸೀಪುರದ ಅವರ ಮನೆ, ಬೆಟ್ಟದ ರಂಗನಾಥ ಸ್ವಾಮಿ ದೇವಸ್ಥಾನ, ಹರದನಹಳ್ಳಿಯಲ್ಲಿ ಬಿಗಿ ಬಂದೋಬಸ್ತ್‌ ಮಾಡಲಾಗಿತ್ತು.

‘ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದ ಸಭೆಯಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ತೆರಳಿದರು’ ಎಂದು ಅವರ ನಿಕಟವರ್ತಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT