ಸೋಮವಾರ, ಅಕ್ಟೋಬರ್ 18, 2021
27 °C

ಹಾಸನ: ಕಂದಾಯ ನಿರೀಕ್ಷಕ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಸಕಲೇಶಪುರ ಪುರಸಭೆ ಕಂದಾಯ ನಿರೀಕ್ಷಕ ಗೋಪಾಲಕೃಷ್ಣ (41) ನಗರದಲ್ಲಿ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಗರದ ಹೊರ ವಲಯದ ಚಿಕ್ಕಕೊಂಡಗೊಳ ನಿವಾಸಿಯಾಗಿದ್ದ ಗೋಪಾಲಕೃಷ್ಣ, ಎರಡು ವರ್ಷಗಳಿಂದ ಸಕಲೇಶಪುರ ಪುರಸಭೆ ಕಂದಾಯ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸತ್ಯ ಮಂಗಲ ಬಡಾವಣೆಯ ತಮ್ಮ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೆಳಗ್ಗೆ ಟೆರೇಸ್ ಮೇಲೆ ನೇಣಿಗೆ ಶರಣಾಗಿದ್ದಾರೆ.

‘ನನಗೆ ಬದುಕಲು ಇಷ್ಟವಿಲ್ಲ. ಆದ್ದರಿಂದ ಸಾಯುತ್ತಿದ್ದೇನೆ’ ಎಂದು ಗೋಪಾಲಕೃಷ್ಣ ಮರಣ ಪತ್ರದಲ್ಲಿ ಬರೆದಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಅನಾರೋಗ್ಯ ಕಾರಣದಿಂದಲೇ ಬೇಲೂರು ತಾಲೂಕು ಅರೇಹಳ್ಳಿ ಹೋಬಳಿ ಗ್ರಾಮ ಲೆಕ್ಕಿಗರೊಬ್ಬರು ಮೊನ್ನೆಯಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು