‘ತೀರ್ಪುಗಳ ಮರುಪರಿಶೀಲನೆಯಾಗಲಿ’

ಹಾಸನ: ರಾಯಚೂರು ಕೋರ್ಟ್ ಆವರಣದಲ್ಲಿ ಗಣರಾಜ್ಯೋ
ತ್ಸವ ದಿನ
ದಂದು ಅಂಬೇಡ್ಕರ್ ಭಾವಚಿತ್ರ ತೆಗೆಸಿ ಅಗೌರವ ಸೂಚಿಸಿದ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ದೇಶ ದ್ರೋಹ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು ಎಂದು ಭೀಮ್ ಆರ್ಮಿ ದಕ್ಷಿಣ ಕರ್ನಾಟಕ ವಿಭಾಗದ ಪ್ರಧಾನ ಕಾರ್ಯದರ್ಶಿ ಎಚ್.ಆರ್
ಪ್ರಸಾದ್ ಆಗ್ರಹಿಸಿದರು.
ಅಂಬೇಡ್ಕರ್ ಭಾವಚಿತ್ರ ಇದ್ದರೆ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಮಲ್ಲಿಕಾರ್ಜುನ ಗೌಡ ಹೇಳಿ ತೆಗೆಸಿರುವ ವಿಡಿಯೋ ಎಲ್ಲಾ ಕಡೆ ಹರಿದಾಡುತ್ತಿದೆ. ಈ ಮೂಲಕ ಅವರು ಸಂವಿಧಾನ ಹಾಗೂ ದೇಶದ ಮಹಾ ನಾಯಕನಿಗೆ ಅವಮಾನ ಮಾಡಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ನ್ಯಾಯಾಧೀಶರು ತಮ್ಮ ವೃತ್ತಿ ಜೀವನದಲ್ಲಿ ಈ ವರೆಗೆ ನೀಡಿರುವ ತೀರ್ಪುಗಳ ಬಗ್ಗೆ ಅನುಮಾನವಿದ್ದು, ಎಲ್ಲವನ್ನೂ ಪುನರ್ ಪರಿಶೀಲನೆ ಮಾಡಬೇಕು. ಜತೆಗೆ ಅವರ ವಿರುದ್ಧ ದೇಶ ದ್ರೋಹ ಪ್ರಕರಣ ದಾಖಲಿಸಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೈ ಕೋರ್ಟ್ ಹಾಗೂ ರಾಜ್ಯ ಪಾಲರಿಗೆ ಮನವಿ ಮಾಡಲಾಗುವುದು ಎಂದರು.
ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಎಚ್.ಎಸ್ ಪ್ರದೀಪ್ ಮಾತನಾಡಿ, ಸಂವಿಧಾನದ ಅಡಿಯಲ್ಲಿ ಕೆಲಸ ಮಾಡುವ ನ್ಯಾಯಾಧೀಶರೇ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ. ಇದು ದೇಶಕ್ಕೆ, ಸಂವಿಧಾನಕ್ಕೆ ಮಾಡಿದ ಅವಮಾನ. ಇದನ್ನು ಖಂಡಿಸಿ ಜ.29ರಂದು ನಗರದ ಹೇಮಾವತಿ ಪ್ರತಿಮೆಯಿಂದ ಮೆರವಣಿಗೆ ಹೊರಟು, ಎನ್.ಆರ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿ, ಪ್ರತಿಕೃತಿ ದಹನ ಮಾಡಿ ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಗೋಷ್ಠಿಯಲ್ಲಿ ಜಿಲ್ಲಾ ಸಂಚಾಲಕರಾದ ಪ್ರೀತಂ, ಮಂಜು, ರವಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.