ಸೋಮವಾರ, ಅಕ್ಟೋಬರ್ 26, 2020
28 °C

ಕಾರು ಡಿಕ್ಕಿ: ಗ್ರೂಪ್‌ ಡಿ ನೌಕರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೇಲೂರು:  ತಾಲ್ಲೂಕಿನ ಶಿವಯೋಗಿಪುರದಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಚಾಲಕ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.  

ಅರೇಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಗ್ರೂಪ್ ಡಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂಜು (30) ಮೃತಪಟ್ಟಿದ್ದಾರೆ.  ಹಾಸನದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ನಡೆಸುತ್ತಿದ್ದ ಮುಷ್ಕರದಲ್ಲಿ ಭಾಗವಹಿಸಿ ವಾಪಸ್‌ ಊರಿಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಹಿಂಬದಿ ಸವಾರರಾದ ನಾರಾಯಣ, ಮಮತಾ ಅವರ ಕೈ, ಕಾಲು, ತಲೆಗೆ ಪೆಟ್ಟಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.  

ರಸ್ತೆ ಮೇಲೆ ಸತ್ತು ಬಿದ್ದಿದ್ದ ನಾಯಿ ಮೇಲೆ ಕಾರು ಹತ್ತುವುದನ್ನು ತಪ್ಪಿಸಲು ಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.    

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.