ಬುಧವಾರ, ಅಕ್ಟೋಬರ್ 21, 2020
26 °C

ಅಪಘಾತ: ಹಲವರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಕಲೇಶಪುರ: ತಾಲ್ಲೂಕಿನ ಗುಲಗಳಲೆ ಸಮೀಪ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಟ್ಯಾಂಕರ್‌ ಲಾರಿಯು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಸಕಲೇಶಪುರ ಕಡೆಯಿಂದ ಹಾಸನಕ್ಕೆ ಹೋಗುತ್ತಿದ್ದ ಬಸ್‌ಗೆ ಹಾಸನದಿಂದ ಮಂಗಳೂರಿನತ್ತ ವೇಗವಾಗಿ ಹೋಗುತ್ತಿದ್ದ ಟ್ಯಾಂಕರ್‌ ರಸ್ತೆಯ ತಿರುವಿನಲ್ಲಿ ಬಸ್‌ನ ಬಲಭಾಗಕ್ಕೆ ಡಿಕ್ಕಿ ಹೊಡೆದಿದೆ. ಚಾಲಕ ಬಸ್‌ಅನ್ನು ರಸ್ತೆ ಬದಿಯ ಹೊಂಡಕ್ಕೆ ಇಳಿಸಿದ್ದಾರೆ. ಇದರಿಂದಾಗಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಾಳುಗಳನ್ನು ಸಕಲೇಶಪುರದ ಕ್ರಾಫರ್ಡ್‌ ಸರ್ಕಾರಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ, ಕೆಲವರನ್ನು ಹಾಸನಕ್ಕೆ ಕಳುಹಿಸಲಾಗಿದೆ.

ಟ್ಯಾಂಕರ್ ಲಾರಿ ಕಾಫಿ ತೋಟಕ್ಕೆ ನುಗ್ಗಿದ್ದು, ಚಾಲಕ ಹಾಗೂ ಕ್ಲೀನರ್‌ ಸಹ ಅಪಾಯದಿಂದ ಪಾರಾಗಿದ್ದಾರೆ. ಇನ್‌ಸ್ಪೆಕ್ಟರ್‌ ಗಿರೀಶ್‌ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.