ಹಾಸನ: ಜಿಲ್ಲೆಯಲ್ಲಿ ಈ ವರ್ಷ ಇದುವರೆಗೆ 2,499 ಅಪಘಾತಗಳು ಸಂಭವಿಸಿದ್ದು, 426 ಮಂದಿ ಮೃತಪಟ್ಟಿದ್ದಾರೆ. ಜನರ ಜೀವ ರಕ್ಷಣೆ ಹಾಗೂ ಸುರಕ್ಷತೆಗಾಗಿ ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಎಸ್. ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪದೇ ಪದೇ ರಸ್ತೆ ಅಪಘಾತಗಳು ಸಂಭವಿಸುತ್ತಿರುವ ಸ್ಥಳಗಳನ್ನು ಗುರುತಿಸಿ, ಸಾರ್ವಜನಿಕರಿಗೆ ಎಚ್ಚರಿಕೆ ನೀಡುವ ಮಾಹಿತಿ ಫಲಕಗಳನ್ನು ಅಳವಡಿಸಬೇಕು ಎಂದರು.

ತಾಲ್ಲೂಕು ಮಟ್ಟದಲ್ಲಿಯೂ ರಸ್ತೆ ಸುರಕ್ಷತಾ ಸಭೆ ನಡೆಸಬೇಕು. ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು. ಇದನ್ನು ತಾಲ್ಲೂಕು ಮಟ್ಟದಲ್ಲೂ ಅನುಷ್ಠಾನ ಮಾಡಬೇಕು. ಈಗಾಗಲೇ ಆಗಿರುವ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ಎಚ್ಚರಿಕೆ ವಹಿಸಿ ಎಂದ ಅವರು, ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುವ ಅಪಘಾತಗಳ ಬಗ್ಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪಾದಚಾರಿಗಳು ಓಡಾಡಲು ಇರುವ ಫುಟ್ಪಾತ್ನಲ್ಲಿ ವ್ಯಾಪಾರ ನಡೆಸುತ್ತಿದ್ದಾರೆ. ಅನಿವಾರ್ಯವಾಗಿ ಪಾದಚಾರಿಗಳು ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದು, ಅಪಘಾತ ಸಂಭವಿಸುತ್ತಿವೆ. ಹಿಟ್ ಅಂಡ್ ರನ್ ಪ್ರಕರಣಗಳು ನಡೆಯುತ್ತವೆ. ಹೀಗಾಗಿ ಫುಟ್ಪಾತ್ ಅತಿಕ್ರಮಣ ತೆರವುಗೊಳಿಸಲು ಸ್ಥಳೀಯ ಸಂಸ್ಥೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಶಾಲಾ– ಕಾಲೇಜು ಮಕ್ಕಳಿಗೆ ಟ್ರಾಫಿಕ್ ಸಿಗ್ನಲ್ ಬಗ್ಗೆ ಅರಿವು ಮೂಡಿಸಬೇಕು. ಅಧಿಕಾರಿಗಳು, ಸಿಬ್ಬಂದಿ ಹಾಗೂ ಚಾಲಕರಿಗೆ ಟ್ರಾಫಿಕ್ ಸಿಗ್ನಲ್ ಹಾಗೂ ರಸ್ತೆ ಸುರಕ್ಷತೆ ಕುರಿತು ಒಂದು ಪರೀಕ್ಷೆ ನಡೆಸಲಾಗುವುದು. ವಿಜೇತರಾದವರಿಗೆ ಜನವರಿ 26 ರಂದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ವಾಣಿಜ್ಯ ಸಂಕೀರ್ಣ, ಕಲ್ಯಾಣ ಮಂಟಪಗಳಲ್ಲಿ ವಾಹನ ನಿಲುಗಡೆಗೆ ಸೂಕ್ತ ಸ್ಥಳಾವಕಾಶ ಇರಬೇಕು. ರಸ್ತೆ ಬದಿಯಲ್ಲಿ ವಾಹನ ನಿಲುಗಡೆ ಮಾಡುವುದರಿಂದ ಅಪಘಾತ ಸಂಭವಿಸುವ ಸಾಧ್ಯತೆ ಇದೆ. ಪರವಾನಗಿ ಇಲ್ಲದೆ ವಾಹನ ಚಾಲನೆ ಮಾಡಬಾರದು. ಪೋಷಕರು 18 ವರ್ಷದೊಳಗಿನ ಮಕ್ಕಳಿಗೆ ವಾಹನ ಚಾಲನೆ ಮಾಡಲು ನೀಡಬಾರದು ಎಂದು ತಿಳಿಸಿದರು.

ಅರಸೀಕೆರೆಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಎದುರು ರಸ್ತೆ ಉಬ್ಬು ಅಳವಡಿಸಲು ಸೂಚಿಸಿದ ಅವರು, ಕುರಿ, ಕೋಳಿ ತ್ಯಾಜ್ಯವನ್ನು ರಸ್ತೆ ಬದಿಯಲ್ಲಿ ಹಾಕುತ್ತಿರುವುದರಿಂದ ನಾಯಿಗಳು ಅದನ್ನು ತಿನ್ನಲು ಬರುತ್ತವೆ. ವಾಹನಗಳಿಗೆ ಅಡ್ಡ ಬರುವುದರಿಂದ ಅಪಘಾತಕ್ಕೆ ಕಾರಣವಾಗುತ್ತದೆ. ರಸ್ತೆಗಳ ಬದಿಯಲ್ಲಿ ತ್ಯಾಜ್ಯ ಹಾಕಬಾರದು ಎಂದು ತಿಳಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ರಾಜು, ಉಪ ವಿಭಾಗಾಧಿಕಾರಿ ಜಗದೀಶ್ ಗಂಗಣ್ಣನವರ್, ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ಕೆರೆ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಬೇಕು. ತೆರವುಗೊಳಿಸಿದ ನಂತರ ಪುನಃ ಒತ್ತುವರಿಗೆ ಅವಕಾಶ ನೀಡಬಾರದು.

-ಕೆ.ಎಸ್. ಲತಾಕುಮಾರಿ ಜಿಲ್ಲಾಧಿಕಾರಿ

ಜನಸ್ಪಂದನ: ಅರ್ಜಿಗಳ ವಿಲೇವಾರಿಗೆ ಸೂಚನೆ ಜಿಲ್ಲಾ ಉಸ್ತುವಾರಿ ಸಚಿವರು ನ.11 ರಂದು ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕೃತವಾಗಿರುವ ಅರ್ಜಿಗಳ ಬಗ್ಗೆ ಗಂಭೀರವಾಗಿ ಪರಿಗಣಿಸಿ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ಈಗಾಗಲೇ ವಿಲೇವಾರಿ ಆಗಿರುವ ಕುರಿತು ಇಲಾಖಾವಾರು ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಲತಾಕುಮಾರಿ ಹೇಳಿದರು. ಪೋಡಿ ದುರಸ್ತಿ ಸಾಗುವಳಿ ಚೀಟಿ ನಕಾಶೆ ರಸ್ತೆ ಸರ್ಕಾರದ ಜಮೀನು ಕೆರೆ ಕಟ್ಟೆ ಗೋಮಾಳ ಒತ್ತುವರಿ ತೆರವು ಮತ್ತಿತರ ಕೆಲಸಗಳನ್ನು ಶೀಘ್ರವಾಗಿ ಪರಿಹರಿಸಬೇಕು. ತಾಲ್ಲೂಕು ಮಟ್ಟದಲ್ಲಿ ಪ್ರತಿ ತಿಂಗಳ ಮೂರನೇ ಸೋಮವಾರ ರೈತರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಲು ರೈತ ಸಂಪರ್ಕ ಸಭೆ ಹಾಗೂ ಮೊದಲ ಶನಿವಾರ ಜನಸಂಪರ್ಕ ಸಭೆ ನಡೆಸುವಂತೆ ತಹಶೀಲ್ದಾರರಿಗೆ ಸೂಚಿಸಿದರು. ತಾಲ್ಲೂಕು ಮಟ್ಟದಲ್ಲಿ ಜನ ಸ್ಪಂದನ ಸಭೆ ನಡೆಸಿ ಸಮಸ್ಯೆ ಪರಿಹರಿಸಿದರೆ ಜಿಲ್ಲಾ ಮಟ್ಟಕ್ಕೆ ಸಾರ್ವಜನಿಕರು ಬರುವುದು ತಪ್ಪುತ್ತದೆ. ತಾಲ್ಲೂಕು ಮಟ್ಟದಲ್ಲಿ ಅಂಗವಿಕಲರು ಹಿರಿಯ ನಾಗರಿಕರು ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ವಿಶೇಷ ಸಭೆ ನಡೆಸಬೇಕು. ಹೆಣ್ಣು ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.