ಕೊಣನೂರು: ನನೆಗುದಿಗೆ ಬಿದ್ದಿರುವ ರಾಮನಾಥಪುರ ಸೇತುವೆಯ ಸಂಪರ್ಕ ರಸ್ತೆ ಕಾಮಗಾರಿಯನ್ನು ತತ್ವರಿತವಾಗಿ ಕೈಗೆತ್ತಿಕೊಳ್ಳುವಂತೆ ಶಾಸಕ ಎ.ಮಂಜು ಗುತ್ತಿಗೆದಾರ ಮತ್ತು ಎಂಜಿನಿಯರ್ಗಳಿಗೆ ತಾಕೀತು ಮಾಡಿದರು.

ರಾಮನಾಥಪುರದಲ್ಲಿ ಕಾವೇರಿ ನದಿಗೆ ನಿರ್ಮಿಸುತ್ತಿರುವ ಸೇತುವೆಯ ಸ್ಥಳಕ್ಕೆ ಶನಿವಾರ ಕೆಆರ್ ಡಿಸಿಎಲ್ ಎಂಜಿನಿಯರ್ ಹಾಗೂ ಗುತ್ತಿಗೆದಾರರನ್ನು ಕರೆಸಿ ಕಾಮಗಾರಿ ನನೆಗುದಿಗೆ ಬಿದ್ದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

‘ಕಳೆದ ಬಾರಿ ಸಚಿವನಾಗಿದ್ದ ವೇಳೆ ಮಂಜೂರಾಗಿದ್ದ ಸೇತುವೆ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿರುವ ಆಂಧ್ರಪ್ರದೇಶ ಮೂಲದ ಬಿ.ಎಸ್.ಆರ್. ಕನ್ಸ್ಟ್ರಕ್ಸನ್ ಕಂಪನಿ ಇಂದಿಗೂ ಪೂರ್ಣಗೊಳಿಸದೆ ಸ್ಥಗಿತಗೊಂಡಿದೆ. ಇದಕ್ಕೆ ಎಂಜಿನಿಯರ್ ಮತ್ತು ಗುತ್ತಿಗೆದಾರರ ಬೇಜವಾಬ್ದಾರಿಯೇ ಕಾರಣ. ಮೀನುಗಾರಿಕೆ ಇಲಾಖೆಗೆ ಸೇರಿದ ಕಟ್ಟಡಗಳನ್ನು ನೆಲಸಮಗೊಳಿಸಿದರೂ ಇಲಾಖೆಗೆ ಪರ್ಯಾಯ ವ್ಯವಸ್ಥೆ ಕೈಗೊಂಡು ಕಾಮಗಾರಿ ಕೈಗೆತ್ತಿಕೊಂಡಿಲ್ಲ’ ಎಂದು ಗುತ್ತಿಗೆದಾರ ಮತ್ತು ಎಂಜಿನಿಯರ್ ಅವರನ್ನು ತರಾಟೆಗೆ ತೆಗೆದುಕೊಂಡರು.

ಕೆಆರ್ ಡಿಸಿಎಲ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಲಕ್ಷ್ಮೀ, ಸಹಾಯಕ ಎಂಜಿನಿಯರ್ ರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.