ಭಾನುವಾರ, ಜನವರಿ 17, 2021
29 °C

ಡಿಸಿ ರೋಹಿಣಿ ಸಿಂಧೂರಿ ಕರ್ತವ್ಯಕ್ಕೆ ಹಾಜರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ ಜಿಲ್ಲಾಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾದ ರೋಹಿಣಿ ಸಿಂಧೂರಿ ಅವರನ್ನು ಶಾಸಕ ಪ್ರೀತಂ ಜೆ.ಗೌಡ ಹೂಗುಚ್ಛ ನೀಡಿ ಸ್ವಾಗತಿಸಿದರು.

ಹಾಸನ: ಮೂರೂವರೆ ತಿಂಗಳ ಕಾನೂನು ಹೋರಾಟದ ಬಳಿಕ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮಂಗಳವಾರ ಜಿಲ್ಲಾಧಿಕಾರಿಯಾಗಿ ಮತ್ತೆ ಅಧಿಕಾರ ವಹಿಸಿಕೊಂಡರು.

ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ನಾನು ಹಿಂದೆ ಕೆಲಸ ಮಾಡಿದ ರೀತಿಯಲ್ಲಿಯೇ ಮುಂದೆಯೂ ಕರ್ತವ್ಯ ನಿರ್ವಹಿಸುತ್ತೇನೆ’ ಎಂದರು.

‘ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇದೆ ಎನ್ನುವುದು ರಾಜಕೀಯ ವಿಷಯ. ನಾನು ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಅಷ್ಟೆ. ಇದರಿಂದ ನನ್ನ ಕೆಲಸದ ಮೇಲೆ ಯಾವ ಪರಿಣಾಮವೂ ಅಗುವುದಿಲ್ಲ’ ಎಂದು ಪ್ರತಿಪಾದಿಸಿದರು.

‘ಒಬ್ಬ ಜಿಲ್ಲಾಧಿಕಾರಿಗೆ ಒಂದು ಜಿಲ್ಲೆಯಲ್ಲಿ ಕನಿಷ್ಠ ಎರಡು ವರ್ಷ ಕಾರ್ಯನಿರ್ವಹಿಸಲು ಅವಕಾಶ ನೀಡಬೇಕು ಎನ್ನುವ ನಿಯಮವಿದೆ. ಜಿಲ್ಲೆಯ ಸಮಸ್ಯೆ ಅರ್ಥ ಮಾಡಿಕೊಳ್ಳಲು ಕನಿಷ್ಠ 6 ತಿಂಗಳು ಕಾಲಾವಕಾಶ ಬೇಕಾಗುತ್ತದೆ. ಎಲ್ಲವನ್ನೂ ಅರಿತ ತಕ್ಷಣವೇ ವರ್ಗಾವಣೆಯಾದರೆ ಜಿಲ್ಲೆಯ ಮಟ್ಟಿಗೆ ತೊಂದರೆಯಾಗುತ್ತದೆ’ ಎಂದರು.

‘ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಕೆಲಸಕ್ಕೆ ಆದ್ಯತೆ ನೀಡುತ್ತೇನೆ. ಜನರ ಸಮಸ್ಯೆಯನ್ನು ಅರ್ಥ ಮಾಡಿಕೊಂಡು ಕಾರ್ಯ ನಿರ್ವಹಿಸುತ್ತೇನೆ’ ಎಂದು ಭರವಸೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು