ಬೇಲೂರು (ಹಾಸನ ಜಿಲ್ಲೆ): ‘ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಹೆಸರಲ್ಲಿ ₹25 ಕೋಟಿ ವೆಚ್ಚದಲ್ಲಿ ಸ್ಮಾರಕ ನಿರ್ಮಿಸಲು ವಿಸ್ತೃತ ಯೋಜನಾ ವರದಿ ಸಿದ್ಧವಾಗಿದೆ’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಇಲ್ಲಿ ತಿಳಿಸಿದರು.

ಪಟ್ಟಣದಲ್ಲಿ ಶುಕ್ರವಾರ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಹಳೇಬೀಡಿನ ಯುನೆಸ್ಕೊ ತಾಣದಲ್ಲಿರುವ 10ಎಕರೆಯಲ್ಲಿ ಪ್ರವಾಸೋದ್ಯಮ ಇಲಾಖೆಯು ಸ್ಮಾರಕ ನಿರ್ಮಾಣವಾಗಲಿದೆ’ ಎಂದು ತಿಳಿಸಿದರು.

‘ಬೇಲೂರು, ಕೊಡಗು, ಚಿಕ್ಕಮಗಳೂರಿನಲ್ಲಿ ಕಾಡಾನೆ ಸಮಸ್ಯೆ ಇದೆ. ಆನೆಗಳಿಂದ ಆಗುವ ಬೆಳೆಹಾನಿ, ಜೀವ ಹಾನಿ ತಪ್ಪಿಸಲು ಆನೆಧಾಮ ಸ್ಥಾಪನೆಗೆ 2ಸಾವಿರ ಎಕರೆ ಭೂಮಿ ಗುರುತಿಸಲಾಗಿದ್ದು, ಸಚಿವ ಸಂಪುಟದ ಅನುಮೋದನೆ ಪಡೆಯಲಾಗಿದೆ’ ಎಂದರು.

‘ಆನೆಗಳ ಸಂಚಾರದ ಬಗ್ಗೆ ನಿಗಾ ಇಟ್ಟು ಸ್ಥಳೀಯರಿಗೆ ಮಾಹಿತಿ ನೀಡಲು ಕಮಾಂಡ್ ಸೆಂಟರ್ ಸ್ಥಾಪಿಸಲಾಗಿದೆ. ಆನೆ ಸಂಚಾರದ ಬಗ್ಗೆ ಇಲಾಖೆ ಸಿಬ್ಬಂದಿಯು ನೀಡುವ ಎಚ್ಚರಿಕೆಯನ್ನು ಪಾಲಿಸಿದರೆ ಜೀವ ಹಾನಿ ತಪ್ಪಿಸಬಹುದು’ ಎಂದು ಅಭಿಪ್ರಾಯಪಟ್ಟರು.

‘ಪ್ರತಿಭಾ ಪುರಸ್ಕಾರಕ್ಕಾಗಿ ವೀರಶೈವ ಮಹಾಸಭಾದಿಂದ ₹ 1 ಕೋಟಿ’

ಮೀಸಲು ಬೇಲೂರು (ಹಾಸನ ಜಿಲ್ಲೆ): ‘ವೀರಶೈವ ಲಿಂಗಾಯತ ಸಮಾಜದ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ತಾಲ್ಲೂಕಿಗೊಂದು ವಿದ್ಯಾರ್ಥಿನಿಲಯ ನಿರ್ಮಿಸುವುದು ಮಹಾಸಭಾದ ಗುರಿಯಾಗಿದೆ’ ಎಂದು ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆದ ಸಚಿವ ಈಶ್ವರ ಖಂಡ್ರೆ ಇಲ್ಲಿ ತಿಳಿಸಿದರು. ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಸಮುದಾಯದ ಮಕ್ಕಳನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜುಗೊಳಿಸಲು ತರಬೇತಿ ಕೇಂದ್ರವನ್ನು ಸ್ಥಾಪಿಸಲಾಗುವುದು’ ಎಂದು ಹೇಳಿದರು. ‘ಈಗಾಗಲೇ ಹಲವು ಜಿಲ್ಲಾ ಕೇಂದ್ರಗಳಲ್ಲಿ ವಿದ್ಯಾರ್ಥಿನಿಯರ ವಸತಿನಿಲಯ ನಿರ್ಮಿಸಲಾಗಿದೆ. ಈ ವರ್ಷ ಎಸ್ಎಸ್ಎಲ್ಸಿ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದವರನ್ನು ಪುರಸ್ಕರಿಸಲು ₹1 ಕೋಟಿ ಮೀಸಲಿಡಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.