ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಪುಟ್ಟರಂಗಶೆಟ್ಟಿ ವಜಾಕ್ಕೆ ಒತ್ತಾಯ; ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Last Updated 6 ಜನವರಿ 2019, 13:45 IST
ಅಕ್ಷರ ಗಾತ್ರ

ಹಾಸನ: ಸಚಿವ ಪುಟ್ಟರಂಗಶೆಟ್ಟಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಹಾಗೂ ರಾಜ್ಯ ಸರ್ಕಾರ ಇಂಧನ ಬೆಲೆ ಮೇಲೆ ವಿಧಿಸಿರುವ ಸುಂಕ ಹಿಂಪಡೆಯಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಮೈತ್ರಿ ಸರ್ಕಾರ ವಿರುದ್ಧ ಘೋಷಣೆ ಕೂಗಿದರು.

‘ವಿಧಾನಸೌಧದಲ್ಲಿರುವ ಸಚಿವರ ಕಚೇರಿಯಿಂದ ಅವರ ಆಪ್ತ ಸಿಬ್ಬಂದಿ ಬರೋಬ್ಬರಿ ₹ 25.76 ಲಕ್ಷ ಹಣ ಸಾಗಿಸುವ ವೇಳೆ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಇದು ಸಮ್ಮಿಶ್ರ ಸರ್ಕಾರದ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.

‘ಕೂಡಲೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪುಟ್ಟರಂಗಶೆಟ್ಟಿ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು. ಪ್ರಕರಣದ ತನಿಖೆ ನಡೆಸಿ ಜನರಿಗೆ ಸತ್ಯಾಂಶ ತಿಳಿಸಬೇಕು’ ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡಿಸೇಲ್ ಮೇಲೆ ಸುಂಕ ಏರಿಕೆ ಮಾಡಿರುವುದರಿಂದ ಜನಸಾಮಾನ್ಯರಿಗೆ ಹೊರೆಯಾಗಿದೆ. ಬರದಿಂದಾಗಿ ಜನರು ಮೊದಲೇ ಸಂಕಷ್ಟದಲ್ಲಿದ್ದಾರೆ. ಕೂಡಲೇ ಸುಂಕ ಏರಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ನವಿಲೆ ಅಣ್ಣಪ್ಪ, ವೇಣು ಗೋಪಾಲ್‌, ಶೋಭನ್ ಬಾಬು, ಎಸ್.ಡಿ. ಚಂದ್ರು, ಚನ್ನಕೇಶವ, ಸುಶೀಲ ಅಣ್ಣಪ್ಪ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT