ಹಾಸನ: ಎ.ಮಂಜು ಪರ ಚುನಾವಣಾ ಪ್ರಚಾರ ಆರೋಪ, ಶಿಕ್ಷಕ ಮೋಹನ್ ಕುಮಾರ್ ಅಮಾನತು

7

ಹಾಸನ: ಎ.ಮಂಜು ಪರ ಚುನಾವಣಾ ಪ್ರಚಾರ ಆರೋಪ, ಶಿಕ್ಷಕ ಮೋಹನ್ ಕುಮಾರ್ ಅಮಾನತು

Published:
Updated:
Deccan Herald

ಹಾಸನ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎ.ಮಂಜು ಪರ ಪ್ರಚಾರ ಮಾಡಿದ ಆರೋಪದ ಮೇರೆಗೆ ಅರಕಲಗೂಡು ತಾಲ್ಲೂಕಿನ ಬಿದರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಟಿ.ಕೆ.ಮೋಹನ್ ಕುಮಾರ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್.ಶಿವನಂಜೇಗೌಡ ಆದೇಶ ಹೊರಡಿಸಿದ್ದಾರೆ.

ಅರಕಲಗೂಡು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎ.ಮಂಜು ಪರ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತಯಾಚನೆ ಮಾಡಿದ ವಿಡಿಯೊ ತುಣುಕುಗಳನ್ನು ವಾಟ್ಸ್ ಆ್ಯಪ್ ಮೂಲಕ ಹರಿಬಿಟ್ಟಿದ್ದರು. ಅಲ್ಲದೇ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷರೂ ಆಗಿದ್ದ ಮೋಹನ್‌ ಕುಮಾರ್‌, ಶಿಕ್ಷಕರಿಗೆ ಅಂಚೆ ಮತಪತ್ರ ನೀಡುವಂತೆ ಹಾಗೂ ಮಂಜುಗೆ ಮತ ನೀಡುವಂತೆ ಒತ್ತಡ ಹೇರಿದ್ದರು ಎಂಬ ಆರೋಪಿಸಲಾಗಿತ್ತು.

‘ಮೋಹನ್‌ಕುಮಾರ್‌ ವಿರುದ್ಧದ ಆರೋಪ ಮೇಲ್ನೋಟಕ್ಕೆ ಸತ್ಯವಾಗಿದ್ದು, ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳುವಂತೆ’ ಪ್ರಕರಣದ ತನಿಖೆ ನಡೆಸಿದ ಸಕಲೇಶಪುರ ಉಪವಿಭಾಗಾಧಿಕಾರಿ ವರದಿ ನೀಡಿದ್ದರು.

ಇಲಾಖಾ ವಿಚಾರಣೆ ಕಾಯ್ದಿರಿಸಿ, ಸೇವೆಯಿಂದ ಅಮಾನತು ಮಾಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 2

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !