ಮಂಗಳವಾರ, ಫೆಬ್ರವರಿ 25, 2020
19 °C
‌ಮನೆಗೆ ಕರೆಯಿಸಿ ದಾಖಲೆ ಪರಿಶೀಲಿಸಿದ ಎಸಿಬಿ ತಂಡ

ಸಹಾಯಕ ಎಂಜಿನಿಯರ್‌ ಮನೆ ಮೇಲೆ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಲೋಕೋಪಯೋಗಿ ಇಲಾಖೆ ಉಪ ವಿಭಾಗದ ಸಹಾಯಕ ಎಂಜಿನಿಯರ್‌ ಚನ್ನೇಗೌಡರ ಮನೆ ಮೇಲೆ ಶುಕ್ರವಾರ ಬೆಳಗ್ಗೆ ದಾಳಿ ನಡೆಸಿದರು.

ಹೇಮಾವತಿ ನಗರದಲ್ಲಿರುವ ನಿವಾಸಕ್ಕೆ ಡಿಎಸ್‌ಪಿ ಪೂರ್ಣಚಂದ್ರ ತೇಜಸ್ವಿ ನೇತೃತ್ವದ ತಂಡ ದಾಳಿ ನಡೆಸಿದ ವೇಳೆ, ಚನ್ನೇಗೌಡ ಹಾಗೂ ಕುಟುಂಬ ಸದಸ್ಯರು ಮನೆಯಲ್ಲಿ ಇರಲಿಲ್ಲ. ಹಾಗಾಗಿ ಅಧಿಕಾರಿಗಳು ಒಂದು ಗಂಟೆಗೂ ಹೆಚ್ಚು ಸಮಯ ಕಾಯಬೇಕಾಯಿತು. ಬಳಿಕ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮನೆಗೆ ಕರೆಸಿಕೊಂಡು, ದಾಖಲೆಗಳ‌ ಪರಿಶೀಲನೆ ನಡೆಸಿದರು.

ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ದೂರಿನ ಮೇರೆಗೆ ಚನ್ನೇಗೌಡರ ಶಾಂತಿಗ್ರಾಮದ ನಿವಾಸದ ಮೇಲೂ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು