ಸಕಲೇಶಪುರ: ಗ್ರಾಮಗಳಲ್ಲಿ ದೇವಸ್ಥಾನ ಗಳು ನಿರ್ಮಾಣ ಆಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ತಾಲ್ಲೂಕಿನ ಕುರುಬತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈಚಲಪುರ ಗ್ರಾಮದ ನೂತನ ಕಾಳಿಕಾ ದುರ್ಗಪರಮೇಶ್ವರಿ ವಿಶ್ವಕರ್ಮ ದೇವಸ್ಥಾನವನ್ನು ಇತ್ತೀಚೆಗೆ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ಬಿಜೆಪಿ ರಾಜ್ಯ ಘಟಕದ ಮಾಜಿ ಉಪಾಧ್ಯಕ್ಷ ಜೈ ಮಾರುತಿ ದೇವರಾಜ್ ಮಾತನಾಡಿ, ‘ಹಿಂದುಗಳು ದೇವಸ್ಥಾನಗಳಿಗೆ ಹೋಗಿ ಪ್ರಾರ್ಥನೆ ಮಾಡುವ ಅಭ್ಯಾಸ ಕಡಿಮೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ’ ಎಂದರು.

ವೇದಬ್ರಹ್ಮ ಚಂದ್ರೇಶ್ ಶರ್ಮ ಸನಾತನ ಧರ್ಮ, ಆಚರಣೆ, ವೇದ, ಮಂತ್ರ, ಪೂಜೆ, ಪ್ರಾರ್ಥನೆ ಬಗ್ಗೆ ಉಪನ್ಯಾಸ ನೀಡಿದರು. ಅರೆಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಪೀಠದ ಶಿವಸುಜ್ಞಾನ ತೀರ್ಥ ಸ್ವಾಮಿ ದೇವಸ್ಥಾನ ಕಳಸ ಪ್ರತಿಷ್ಠಾಪನೆ ಮಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಚಂಚಲ ಕುಮಾರಸ್ವಾಮಿ, ಭೋಗರಾಜ್ ಆಚಾರ್, ಕಾಳಿಕಾ ದುರ್ಗಪರಮೇಶ್ವರಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಎಚ್.ಪಿ. ಭೋಗರಾಜಾಚಾರ್, ದೇವಸ್ಥಾನ ಸ್ಥಾಪಕರಾದ ಪುಷ್ಪಾವತಿ ಮಂಜುನಾಥ್ ಆಚಾರ್, ಹಿಂದೂ ಮುಖಂಡ ರಘುಜಿ, ಸಮಾಜ ಸೇವಕ ಪುನೀತ್ ಬನ್ನಳ್ಳಿ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ವಳಲಹಳ್ಳಿ ಅಶ್ವಥ್, ವಿಎಚ್ಪಿ ಜಿಲ್ಲಾ ಸಹಕಾರ್ಯದರ್ಶಿ ಹರೀಶ್ ಕರಡಿಗಾಲ, ತಾಲ್ಲೂಕು ವಿಶ್ವಕರ್ಮ ಸಮಾಜದ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಎಚ್.ಆರ್. ಮೋಹನ್ಕುಮಾರ್, ಕಾರ್ಯದರ್ಶಿ ರೇಣುಕಾ ಪ್ರಸಾದ್, ಕಾಫಿ ಬೆಳೆಗಾರ ಬೆಳ್ಳೂರು ನಾಗೇಂದ್ರ ಇದ್ದರು. ದಿವ್ಯ ಭೋಗರಾಜಾಚಾರ್ ಪ್ರಾರ್ಥಿಸಿದರು. ಗಾಯತ್ರಿ ಪುನೀತ್ , ಭಾಸ್ಕರ್ ಆಚಾರ್ ನಿರೂಪಿಸಿದರು. ದೇವಸ್ಥಾನ ನಿರ್ಮಾಣಕ್ಕೆ ಸಹಾಯ ಮಾಡಿದವರನ್ನು ಸನ್ಮಾನಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-36-2029604604

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.