ಸಕಲೇಶಪುರ: ‘ಬಿ.ಆರ್.ಅಂಬೇಡ್ಕರ್ ದೇಶಕ್ಕೆ ನೀಡಿದ ಸಂವಿಧಾನವು ಎಲ್ಲ ವರ್ಗಗಳ ಜನರಿಗೆ ಸಮಾನ ಹಕ್ಕು ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಿದೆ’ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಕಲೇಶಪುರ ಘಟಕ–ಚಿಕ್ಕಮಗಳೂರು ವಿಭಾಗದ ವತಿಯಿಂದ ಕೆಎಸ್ಆರ್ಟಿಸಿ ಡಿಪೊ ಆವರಣದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಶಿಕ್ಷಣವೇ ಸಮಾಜ ಪರಿವರ್ತನೆಯ ಶಕ್ತಿಯಾಗಿದ್ದು, ಶಿಕ್ಷಣದ ಮೂಲಕವೇ ಅಭಿವೃದ್ಧಿ ಸಾಧಿಸಬಹುದು. ಸಮಾಜದಲ್ಲಿ ಜಾತಿ ಭೇದ ಹಾಗೂ ಅಸಮಾನತೆ ನಿವಾರಣೆಗೆ ಎಲ್ಲರೂ ದೇಶ ಮೊದಲು ಎಂಬ ಮನೋಭಾವದಿಂದ ಒಗ್ಗಟ್ಟಾಗಿ ಕೆಲಸ ಮಾಡಬೇಕು’ ಎಂದರು.

ಚಿಕ್ಕಮಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಸತೀಶ್ ಮಾತನಾಡಿ, ಸರ್ಕಾರಿ ನೌಕರರು ಸಮಾಜದಲ್ಲಿ ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಪತ್ರಕರ್ತ ನಾಗರಾಜು ಹೆತ್ತೂರು ಮಾತನಾಡಿದರು. ರಾಜ್ಯ ಅಂಬೇಡ್ಕರ್ ಪ್ರಶಸ್ತಿ ವಿಜೇತ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಯೋಜಕ ಅಣ್ಣಯ್ಯ ಹೆತ್ತೂರು ಹಾಗೂ ಸಫಾಯಿ ಕರ್ಮಚಾರಿ ಲಕ್ಷ್ಮೀ ಅವರನ್ನು ಸನ್ಮಾನಿಸಲಾಯಿತು. ರಾಜ್ಯ ಸಮಿತಿಯ ರಾಜ್ಯಾಧ್ಯಕ್ಷ ಎನ್. ರವೀಂದ್ರ ಗೌರವಾಧ್ಯಕ್ಷ ಹಿರೇಮಗಳೂರು ರಾಮಚಂದ್ರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಾಂತರಾಜು ಸಿಡಿಗಳಲೆ, ಕಾನೂನು ಸಲಹೆಗಾರ ಆರ್. ಅನಿಲ್ ಕುಮಾರ್. ಹಾಸನ ಜಿಲ್ಲಾ ಸಂಯೋಜಕ ಎಂ.ಎಸ್. ಯೋಗೇಶ್, ಮಹಿಳಾ ಜಾಗೃತಿ ಮಾರ್ಗದರ್ಶಿ ಅಸೋಸಿಯೇಷನ್ ಅಧ್ಯಕ್ಷೆ ಕಲ್ಪನಾ ಕೀರ್ತಿ ಹಾಗೂ ವಿಭಾಗದ ಅಧ್ಯಕ್ಷ ಎಂ.ಎಸ್. ಉಮೇಶ್ ಪ್ರಾದೇಶಿಕ ತರಬೇತಿ ಕೇಂದ್ರದ ಪ್ರಾಂಶುಪಾಲ ಬಿ.ಅಬ್ದುಲ್ ಖುದ್ದೂಸ್, ವಿಭಾಗೀಯ ಎಂಜಿನಿಯರ್ ಶಿವಲಿಂಗಯ್ಯ, ವಿಭಾಗೀಯ ಸಂಚಲನಾಧಿಕಾರಿ (ಪ್ರಭಾರ) ಶ್ರೀಧರಸ್ವಾಮಿ, ಸಹಾಯಕ ಆಡಳಿತಾಧಿಕಾರಿ ಎಲ್.ಕೆ, ರುದ್ರಮೂರ್ತಿ, ಸಹಾಯಕ ಕಾರ್ಮಿಕ ಕಲ್ಯಾಣಾಧಿಕಾರಿ ಎಸ್, ಮಮತಾ, ಸಹಾಯಕ ಲೆಕ್ಕಾಧಿಕಾರಿ ಕೆ.ಎ.ಜಯಣ್ಣ, ಸಹಾಯಕ ಭದ್ರತಾ ಜಾಗೃತಾಧಿಕಾರಿ ಶರತ್, ಉಗ್ರಾಣಾಧಿಕಾರಿ ಮಹೇಶ್, ಹಿರಿಯ ಘಟಕ ವ್ಯವಸ್ಥಾಪಕ ಎ.ಎನ್.ರವಿ, ಘಟಕ ವ್ಯವಸ್ಥಾಪಕ ಎ.ಎನ್. ಸುದೀಶ್, ಬಿ. ಆರ್. ಮಂಜುನಾಥ್, ಕೃಷ್ಣಪ್ಪ, ರವಿನಾಯ್ಕ, ನಾಗರಾಜ ಖಾರ್ವಿ ಹಾಗೂ ಸದಸ್ಯರು ಇದ್ದರು.

ಸಕಲೇಶಪುರ ಘಟಕದ ಅಧ್ಯಕ್ಷ ಬಿ.ಸಿ.ಮಂಜಯ್ಯ ಮತ್ತು ಪದಾಧಿಕಾರಿಗಳು ನೇತೃತ್ವ ವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಅಮ್ಮ ವಸುಂಧರೆ ಕಲಾತಂಡದ ವತಿಯಿಂದ ಭೀಮಗಾಯನ ನಡೆಯಿತು. ಜಾನಪದ ಕಲಾವಿದ ಅಮೃರಾಮಚಂದ್ರ ಜೀ ಅವರ ತಂಡದ ಗಾಯನ ವಿಶೇಷ ಆಕರ್ಷಣೆಯಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-36-1742579048

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.