ಸಕಲೇಶಪುರ: ಸೆಸ್ಕ್ನ ತಾಂತ್ರಿಕ ತೊಡಕುಗಳಿಂದ ತಾಲ್ಲೂಕಿನ ಕುಡಿಯುವ ನೀರಿನ ಯೋಜನೆಗಳ ಪ್ರಗತಿ ಕುಂಠಿತವಾಗಿದ್ದು, ಬೇಸಿಗೆ ಸಂದರ್ಭದಲ್ಲಿ ಗ್ರಾಮೀಣ ಭಾಗದ ಜನರಿಗೆ ನೀರಿನ ಸಮಸ್ಯೆ ಎದುರಾಗುವ ಆತಂಕ ಉಂಟಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಬುಧವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಟಾಸ್ಕ್ಫೋರ್ಸ್ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆಯಂತೆ ಮೇ 26ರೊಳಗೆ ಕುಡಿಯುವ ನೀರಿನ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಾಗಿದೆ. ಆದರೆ, ಮೂರು ತಿಂಗಳ ಹಿಂದೆಯೇ ಕಾಮಗಾರಿ ಪೂರ್ಣಗೊಂಡಿದ್ದರೂ ವಿದ್ಯುತ್ ಸಂಪರ್ಕ ಸಿಗದೇ ಹಲವಾರು ಯೋಜನೆಗಳು ಸ್ಥಗಿತಗೊಂಡಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಲ್ಲೂಕಿನಲ್ಲಿ ಒಟ್ಟು 87 ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಅದರಲ್ಲಿ 55 ಕಾಮಗಾರಿಗಳ ಭೌತಿಕ ಪ್ರಗತಿ ಬಹುತೇಕ ಪೂರ್ಣಗೊಂಡಿದೆ. ಈ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಇಲಾಖೆಗೆ ಈಗಾಗಲೇ ಸುಮಾರು ₹76 ಲಕ್ಷ ಪಾವತಿಸಲಾಗಿದ್ದರೂ, ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ಸಂಪರ್ಕ ನೀಡುವಲ್ಲಿ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಈ ಕುರಿತು ಹಿರಿಯ ಅಧಿಕಾರಿಗಳ ಮಟ್ಟದಲ್ಲಿ ಹಲವು ಬಾರಿ ಚರ್ಚೆ ನಡೆಸಿದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಬೇಸಿಗೆ ಹಿನ್ನೆಲೆ ತಾಲ್ಲೂಕಿನ 10 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಸುಮಾರು 22 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಇದ್ದು, ಕಾಮಗಾರಿ ಪೂರ್ಣಗೊಂಡ ಯೋಜನೆಗಳಿಗೆ ತಕ್ಷಣವೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಇನ್ನೂ ಪ್ರಗತಿ ಹಂತದಲ್ಲಿರುವ 32 ಕಾಮಗಾರಿಗಳಿಗೆ ವಿದ್ಯುತ್ ಇಲಾಖೆಗೆ ಹಣ ಪಾವತಿಸಬೇಕಿರುವುದಾಗಿ ತಿಳಿಸಿದರು.

ಸರ್ಕಾರಿ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡಿರುವ ಕುಟುಂಬಗಳಿಗೆ ಗ್ರಾಮ ಪಂಚಾಯಿತಿಗಳ ಪರವಾನಗಿ ಇಲ್ಲದ್ದರಿಂದ ಸೆಸ್ಕ್ ವಿದ್ಯುತ್ ಸಂಪರ್ಕ ನೀಡಲು ನಿರಾಕರಿಸುತ್ತಿದೆ. ಇದರ ಪರಿಣಾಮ ಅನೇಕ ಕುಟುಂಬಗಳು ಇನ್ನೂ ಕತ್ತಲಲ್ಲೇ ಬದುಕು ನಡೆಸುವಂತಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಬೇಸರ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿ ಪರವಾನಗಿ ಇಲ್ಲದ ನೆಪದಲ್ಲಿ ಮೂಲಸೌಲಭ್ಯಗಳಿಂದ ಜನರನ್ನು ವಂಚಿಸಲಾಗುತ್ತಿದ್ದು, ಹಲವು ಕುಟುಂಬಗಳು ಕಾಡುಮಾನವರಂತೆ ಜೀವನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಯನ್ನು ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಇಒ ಗಂಗಾಧರ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-36-1887131387

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.