ಬೀದಿ ಬದಿ ವ್ಯಾಪಾರಿಗಳಿಗೆ ನೀಡಿ
‘ಹಳೆ ಬಸ್ ನಿಲ್ದಾಣ ಆವರಣದಲ್ಲಿ ತೆರವುಗೊಳಿಸಲಾಗಿರುವ ಬೀದಿ ಬದಿ ವ್ಯಾಪಾರಿಗಳಿಗೆ ಬದಲಿ ವ್ಯವಸ್ಥೆ ಮಾಡುವವರೆಗೂ ಅಪೂರ್ಣ ಕಟ್ಟಡದ ನೆಲ ಮಳಿಗೆಯಲ್ಲಿ ತಾತ್ಕಾಲಿಕವಾಗಿ ವ್ಯವಸ್ಥೆ ಕಲ್ಪಿಸುವುದು ಸೂಕ್ತ’ ಎಂದು ವರ್ತಕರು ಹೇಳುತ್ತಿದ್ದಾರೆ. ಇತ್ತೀಚೆಗೆ ಸ್ಥಳ ಪರಿಶೀಲಿಸಿದ ಶಾಸಕ ಸಿಮೆಂಟ್ ಮಂಜು ಅವರ ಗಮನವನ್ನೂ ಸೆಳೆದಿದ್ದಾರೆ. ‘ವ್ಯಾಪಾರ ಶುರು ಮಾಡಿದರೆ, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬೀಳುತ್ತದೆ. ಬೀದಿ ಬದಿಯ ವ್ಯಾಪಾರಿಗಳಿಗೆ ಅನುಕೂಲವೂ ಆಗುತ್ತದೆ’ ಎಂದಿದ್ದಾರೆ.