ಸಕಲೇಶಪುರ: ಫೆ.12ರ ಭಾರತ್ ಬಂದ್ ಪ್ರಯುಕ್ತ ಸಕಲೇಶಪುರದಲ್ಲಿ ವಿವಿಧ ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನಾಕಾರರು ಹೇಮಾವತಿ ಪ್ರತಿಮೆಯ ಬಳಿಯಿಂದ ಸಕಲೇಶಪುರ ಹಳೆಯ ಬಸ್ ನಿಲ್ದಾಣದವರೆಗೆ ಮೆರವಣಿಗೆ ನಡೆಸಿ ಬಳಿಕ ಸಭೆ ನಡೆಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಸಿಐಟಿಯು ಕಾರ್ಯದರ್ಶಿ ಸೌಮ್ಯ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳು ಕಾರ್ಮಿಕರ ವಿರೋಧಿಯಾಗಿದ್ದು, ಅವುಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು. ಕಾರ್ಮಿಕರ ಜೀವನ ಭದ್ರತೆ, ನ್ಯಾಯಸಮ್ಮತ ವೇತನ ಹಾಗೂ ಸಾಮಾಜಿಕ ಭದ್ರತೆಗಾಗಿ ದೇಶವ್ಯಾಪಿ ಹೋರಾಟ ಅನಿವಾರ್ಯವಾಗಿದೆ ಎಂದರು.

ಅಕ್ಷರ ದಾಸೋಹ ಸಂಘಟನೆಯ ಸಂಘಟನಾ ಕಾರ್ಯದರ್ಶಿ ಎಂ.ಎಂ. ಸುಮಿತ್ರಾ, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿಗಳಾದ ಪ್ರೀತು ಬಿ.ವಿ., ಸುಮಿತ್ರಾ ಎಚ್.ಎಸ್. ಸೇರಿದಂತೆ ತೋಟ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಇದ್ದರು. ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.