ಹಾಸನ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶನಿವಾರ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲಿಸಿದರು.
ದೋಣಿಗಾಲ್ ಬಳಿ ಕಳೆದ ಹಲವು ವರ್ಷಗಳಿಂದಲೂ ಭೂಕುಸಿತದ ಸಮಸ್ಯೆ ಎದುರಿತ್ತಿರುವ ಸ್ಥಳವನ್ನು ಪರಿಶೀಲಿಸಿದ ಅವರು, ಆದಷ್ಟು ಶೀಘ್ರವಾಗಿ ಸಮಸ್ಯೆಗೆ ಶಾಶ್ವತ ಪರಿಹಾರ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ವೇಳೆ ರಸ್ತೆ ಕಾಮಗಾರಿಯಿಂದ ಭೂ ಕುಸಿತ ಉಂಟಾಗಿ, ಜಮೀನು ಕಳೆದುಕೊಂಡ ಭೂ ಮಾಲೀಕರ ಅಹವಾಲು ಆಲಿಸಿದ ಅವರು, ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು.
ಸಕಲೇಶಪುರದಿಂದ ಗುಂಡ್ಯವರಗೆ ರಸ್ತೆ ಕಾಮಗಾರಿ ಪರಿಶೀಲಿಸಿದ ಸಚಿವ ಜಾರಕಿಹೊಳಿ, ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ನಿರ್ವಹಣೆ ಮಾಡುವಂತೆ ಸಚಿವರು ಸೂಚನೆ ನೀಡಿದರು.
ಶಾಸಕ ಸಿಮೆಂಟ್ ಮಂಜು, ಲೋಕೊಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ, ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಎಂಜಿನಿಯರ್ ಧರ್ಮೇಂದ್ರ, ಎಸ್‌ಎಚ್‌ಡಿಪಿ ಮುಖ್ಯ ಯೋಜನಾಧಿಕಾರಿ ಶಿವಯೋಗಿ ಹಿರೇಮಠ, ಉಪ ವಿಭಾಗಾಧಿಕಾರಿ ಅನಮೋಲ್ ಜೈನ್, ಕಾಂಗ್ರೆಸ್ ಮುಖಂಡ ಮುರಳಿಮೋಹನ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.