ಸಂವಿಧಾನ ಪ್ರತಿ ಸುಟ್ಟವರಿಗೆ ಗಲ್ಲು ಶಿಕ್ಷೆ ವಿಧಿಸಿ

7
ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯ

ಸಂವಿಧಾನ ಪ್ರತಿ ಸುಟ್ಟವರಿಗೆ ಗಲ್ಲು ಶಿಕ್ಷೆ ವಿಧಿಸಿ

Published:
Updated:
Deccan Herald

ಹಾಸನ : ‘ದೇಶದ ಸಂವಿಧಾನದ ಪ್ರತಿ ಸುಟ್ಟು ದೇಶದ್ರೋಹಿ ಕೆಲಸ ಮಾಡಿರುವವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾಧ್ಯಕ್ಷ ಸಂಪತ್ ಕುಮಾರ್ ಒತ್ತಾಯಿಸಿದರು.

‘ಮೀಸಲಾತಿ ಹಾಗೂ ಪರಿಶಿಷ್ಟ ಜಾತಿ, ವರ್ಗದ ದೌರ್ಜನ್ಯ ತಡೆ ಕಾಯ್ದೆ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕೆಲ ದುಷ್ಕರ್ಮಿಗಳು ಸಂವಿಧಾನ ಪ್ರತಿಗಳನ್ನು ಸುಟ್ಟು ಹಾಕಿದ್ದಾರೆ. ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಅಂಬೇಡ್ಕರ್ ರಚಿಸಿರುವ ದೇಶದ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ. ಇದರ ವಿರುದ್ಧ ಘೋಷಣೆ ಕೂಗಿ ಪ್ರತಿಗಳನ್ನು ಸುಟ್ಟು ಹಾಕಿರುವುದು ದೇಶವೇ ತಲೆ ತಗ್ಗಿಸುವ ಸಂಗತಿಯಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಮರುಕಳಿಸದಂತೆ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಹೇಳಿದರು.

ದೇಶದಾದ್ಯಂತ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಭಯದಲ್ಲಿ ಬದುಕುವ ವಾತಾವರಣ ಉಂಟಾಗಿದೆ. ರಾಜ್ಯದಲ್ಲೂ ಅಪ್ರಾಪ್ತೆಯರ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಹೆಚ್ಚಾಗಿದ್ದು, ಅತ್ಯಾಚಾರಿಗೆ ಕಠಿಣ ಶಿಕ್ಷೆ ವಿಧಿಸುವ ಕಾನೂನು ತರಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಗೋಷ್ಠಿಯಲ್ಲಿ ಮುಖಂಡರಾದ ದೇವೇಂದ್ರ ಪ್ರಸಾದ್, ಪ್ರದೀಪ್, ಶರತ್ ಕುಮಾರ್, ಹೇಮಂತ್, ಚಂದ್ರಶೇಖರ್ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !