ಭಾನುವಾರ, ಮಾರ್ಚ್ 7, 2021
32 °C

ಸಕಲೇಶಪುರ: ತೋಟದಲ್ಲಿ ಶ್ರೀಗಂಧದ ಮರ ಕಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಕಲೇಶಪುರ: ಮಾಜಿ ಶಾಸಕ ಎಚ್‌.ಎಂ. ವಿಶ್ವನಾಥ್ ಅವರ ಕಾಫಿ ತೋಟದಲ್ಲಿ ಮಂಗಳವಾರ ತಡರಾತ್ರಿ ಮೂರು ಶ್ರೀಗಂಧದ ಮರಗಳನ್ನು ಕಡಿದು ಕಳ್ಳತನ ಮಾಡಲಾಗಿದೆ.

ತೋಟ ಹಾಗೂ ಬೇಲಿಯಲ್ಲಿ ಇದ್ದ  ಶ್ರೀಗಂಧದ ಮರಗಳನ್ನು ಕಡಿದುಕೊಂಡು ಹೋಗಿದ್ದಾರೆ ಎಂದು ವಿಶ್ವನಾಥ್ ಅವರು ಅರಣ್ಯ ಇಲಾಖೆಗೆ ಲಿಖಿತ ದೂರು ಸಹ ನೀಡಿದ್ದಾರೆ.

ಎರಡು ವರ್ಷಗಳ ಹಿಂದೆ ಇದೇ ತೋಟದಲ್ಲಿ ಕೆಲ ಶ್ರೀಗಂಧದ ಮರಗಳು ಕಳ್ಳತನ ಆಗಿರುವ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಿದ್ದರೂ ಸಹ ಈವರೆಗೂ ಆ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು