ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಮ್ಮ ದೇವಿಗೆ ಎಳ್ಳಿನ ಅಲಂಕಾರ

Last Updated 15 ಜನವರಿ 2021, 4:02 IST
ಅಕ್ಷರ ಗಾತ್ರ

ಅರಕಲಗೂಡು: ಪಟ್ಟಣದಲ್ಲಿ ಗುರುವಾರ ಮಕರ ಸಂಕ್ರಾಂತಿ ಹಬ್ಬವನ್ನು ಜನರು ಶ್ರದ್ಧಾಭಕ್ತಿಯಿಂದ ಆಚರಿಸಿದರು.

ಹಬ್ಬದ ಅಂಗವಾಗಿ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿದವು. ಪಟ್ಟಣದ ಐತಿಹಾಸಿಕ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಲ್ಲಿ ಬೆಳಿಗ್ಗೆ ಮೂಲವಿಗ್ರಹಕ್ಕೆ ಪಂಚಾಮೃತ ಅಭಿಷೇಕ, ಅರ್ಚನೆ ಹಾಗೂ ಪ್ರಸಾದ ವಿನಿಯೋಗ ನಡೆದವು.

ಗ್ರಾಮ ದೇವತೆ ದೊಡ್ಡಮ್ಮ ದೇವಾಲಯದಲ್ಲಿ ಸಂಕ್ರಾಂತಿ ಅಂಗವಾಗಿ ದೇವರ ವಿಗ್ರಹಕ್ಕೆ ಎಳ್ಳಿನಿಂದ ಅಲಂಕಾರ ಮಾಡಲಾ ಗಿತ್ತು. ಜನರು ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು. ಬಂಧುಗಳು, ಗೆಳೆಯರಿಗೆ ಎಳ್ಳುಬೆಲ್ಲ ನೀಡಿ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಚಿಣ್ಣರು ಹೊಸಬಟ್ಟೆ ಧರಿಸಿ ಮನೆ, ಮನೆಗೆ ಎಳ್ಳು ಬೀರಿ ಸಂಭ್ರಮಿಸಿದರು.

ಸಂಜೆ ಗಣಪತಿ ಕೊತ್ತಲು ಉದ್ಯಾನದಲ್ಲಿ ನೂರಾರು ಹಣತೆಗಳನ್ನು ಹಚ್ಚಿ ದೀಪೋತ್ಸವ ನಡೆಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT