ಹಾಸನ: ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಶೇ ನೂರರಷ್ಟು ಗುರಿ ಸಾಧಿಸಲು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ವಿವಿಧ ಇಲಾಖೆಗಳು ಸಾಧಿಸಿರುವ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಿಎಂಕೆಎಸ್ವೈ, ಮುಖ್ಯ ಮಂತ್ರಿ ಸೂಕ್ಷ್ಮ ನೀರಾವರಿ ಯೋಜನೆಯಡಿ ಕೃಷಿ ಪರಿಕರ ಹಾಗೂ ಬಿತ್ತನೆ ಬೀಜ ವಿತರಣೆ ಮಾಡಬೇಕು. ಮಣ್ಣಿನ ಫಲವತ್ತತೆ ಪರೀಕ್ಷೆಗೂ ಒತ್ತು ನೀಡುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಪರಿಶಿಷ್ಟ ಜಾತಿ ರೈತರಿಗೆ ಹೆಚ್ಚಿನ ಪ್ರೋತ್ಸಾಹ ನೀಡಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಉತ್ತೇಜನ ನೀಡುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು.

ಸಣ್ಣ ನೀರಾವರಿ ಇಲಾಖೆ ಹಾಗೂ ಚೆಸ್ಕಾಂ ಅಧಿಕಾರಿಗಳು, ಸಮನ್ವಯದಿಂದ ಕರ್ತವ್ಯ ನಿರ್ವಹಿಸುವ ಮೂಲಕ ಈಗಾಗಲೇ ಕೊರೆದಿರುವ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಬಾಲ ಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಎಲ್ಲ ಪರಿಶಿಷ್ಟ ಜಾತಿ ಮತ್ತು ಪಂಗಡದ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕು. ವೈದ್ಯಕೀಯ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪರಿಕರಗಳ ವಿತರಣೆ ಮಾಡಬೇಕು ಎಂದರು.

ಅಂಗವಿಕಲರಿಗೆ ಸಾಧನ ಸಲಕರಣೆ ವಿತರಣೆ ಮತ್ತು ಶೇ 100ರಷ್ಟು ಯುಡಿಐಡಿ ಕಾರ್ಡ್ ವಿತರಣೆ ಮಾಡಬೇಕು. ಪೂರಕ ಆಹಾರ ಕಾರ್ಯಕ್ರಮದಡಿ ಪೌಷ್ಟಿಕ ಆಹಾರ ಒದಗಿಸಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಂಧಿಸಿದಂತೆ ದೂರುಗಳು ಬಂದಿದ್ದಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ್, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಚಂದ್ರಮೌಳಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ದೂದ್ಪೀರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಯಾವುದೇ ಇಲಾಖೆಯಿಂದ ಅನುದಾನ ಪೂರ್ಣ ಪ್ರಮಾಣದಲ್ಲಿ ವೆಚ್ಚವಾಗದೇ ವಾಪಸ್ ಹೋಗಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ನಿಗಾವಹಿಸಬೇಕು. ಅನುದಾನ ವಾಪಸ್ ಹೋದರೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು
ಕೆ.ಎಸ್. ಲತಾಕುಮಾರಿ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.