ಶುಕ್ರವಾರ, ಮೇ 20, 2022
21 °C

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಅಂಬೇಡ್ಕರ್‌ ಹೆಸರಿನಲ್ಲಿ ಶಾಲೆ–ಕಾಲೇಜು: ರೇವಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಳೆನರಸೀಪುರ: ‘ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಎಲ್.ಕೆ.ಜಿ.ಯಿಂದ ಉನ್ನತ ಶಿಕ್ಷಣದವರೆಗೆ ಶಾಲೆ– ಕಾಲೇಜುಗಳನ್ನು ಡಾ. ಅಂಬೇಡ್ಕರ್ ಹೆಸರಲ್ಲಿ ತೆರೆಯುತ್ತೇವೆ’ ಎಂದು ಶಾಸಕ ಎಚ್.ಡಿ. ರೇವಣ್ಣ ತಿಳಿಸಿದರು.

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಗುರುವಾರ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದರು.

‘ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳ ಮಕ್ಕಳು ಉನ್ನತ ವ್ಯಾಸಂಗ ಮಾಡಿ ಸಮಾಜದ ಮುಖ್ಯವಾಹಿನಿಗೆ ಬರಬೇಕು’ ಎಂದು ಸಲಹೆ ನೀಡಿದರು.

‘ಕೆಲವರು ರಾಜಕೀಯ ಲಾಭಕ್ಕಾಗಿ ಸಂವಿಧಾನ ತಿದ್ದುಪಡಿ ಮಾಡುವ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ. ಆದರೆ, ಸಂವಿಧಾನ ತಿದ್ದುಪಡಿಗೆ ಅವಕಾಶ ನೀಡಬಾರದು’ ಎಂದರು.

ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಡಾ. ಕುಶಾಲ್ ಬರಗೂರು ಮಾತನಾಡಿ, ‘ಅಂಬೇಡ್ಕರ್ ಜಯಂತಿಯನ್ನು ಪರಿಶಿಷ್ಟ ಸಮಾಜ ದವರು ಮಾತ್ರ ಆಚರಿಸುತ್ತಿದ್ದಾರೆ. ಎಲ್ಲ ವರ್ಗ, ಜಾತಿ, ಧರ್ಮದ ಜನರು ಆಚರಿಸ ಬೇಕು’ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು ಶಾಸಕರು ಸನ್ಮಾನಿಸಿದರು.

ಡಿ.ಎಸ್.ಪಿ. ಮುರಳೀಧರ್, ತಹಶೀಲ್ದಾರ್ ಕೆ.ಕೆ. ಕೃಷಮೂರ್ತಿ, ಇಒಕೆ ಯೋಗೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ದಲಿತ ಸಂಘರ್ಷ ಸಮಿತಿಯ ಸೋಮಶೇಖರ್, ವಕೀಲ ಮಂಜುನಾಥ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ವೈ. ಚಂದ್ರಶೇಖರ್, ಪುರಸಭೆ ಮಾಜಿ ಅಧ್ಯಕ್ಷ ಲಕ್ಷ್ಮಣ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಕೂರು ಬಸವರಾಜ್, ಡಿ.ಕೆ. ಕುಮಾರಯ್ಯ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು