ಸೆ. 5ಕ್ಕೆ ಜಿಲ್ಲೆಯ ಸಾಧಕರಿಗೆ ಸನ್ಮಾನ

7

ಸೆ. 5ಕ್ಕೆ ಜಿಲ್ಲೆಯ ಸಾಧಕರಿಗೆ ಸನ್ಮಾನ

Published:
Updated:
Deccan Herald

ಹಾಸನ : ಶಿಕ್ಷಕರ ದಿನಾಚರಣೆ ಅಂಗವಾಗಿ ಸೆ. 5ರಂದು ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ ಎಂದು ಹಿರಿಯ ನಾಗರಿಕರ ವೇದಿಕೆ ಸಂಚಾಲಕ ಬಿ.ಕೆ ಮಂಜುನಾಥ್ ಹೇಳಿದರು.

ಮಲೆನಾಡು ಎಂಜಿನಿಯರಿಂಗ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯುವ ಸಮಾರಂಭದಲ್ಲಿ ರಾಜಕೀಯ, ಶಿಕ್ಷಣ, ಸಾಮಾಜಿಕ ಸೇವೆ ಸೇರಿದಂತೆ ಹಲವು ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಗುವುದು. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿ ಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಸಾನಿಧ್ಯ ವಹಿಸುವರು. ಸಂಸದ ಎಚ್.ಡಿ. ದೇವೇಗೌಡ, ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಭಾಗವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಹಿರಿಯರಾದ ಸಿ.ಎಸ್. ಕೃಷ್ಣಸ್ವಾಮಿ, ಡಾ. ಎ.ಸಿ.ಮುನಿವೆಂಕಟೇಗೌಡ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ. ಶಿವಣ್ಣ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಎಲ್. ಮುದ್ದೇಗೌಡ, ಮಂಗಳೂರು-ಗೋವಾ ವಿಶ್ವವಿದ್ಯಾಲಯದ ಕುಲಪತಿ ಶೇಖ್‌ ಅಲಿ, ಬೆಂಗಳೂರು ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಎಚ್.ಎ.ರಂಗನಾಥ್, ಎಚ್.ಬಿ. ರಮೇಶ್, ಪ್ರೊ. ಎಚ್.ಎಸ್. ನಿಂಗಪ್ಪ, ಚನ್ನಮ್ಮ ದೇವೇಗೌಡ, ಸುಶೀಲ ಶಿವಪ್ಪ, ಡಿ.ಕೆ. ಸತ್ಯನಾರಾಯಣ ಶೆಟ್ಟಿ, ಎಚ್.ಎ. ಗೋವಿಂದಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು ಎಂದರು.

ಸಮಾರಂಭದ ಸಿದ್ಧತೆಗಾಗಿ ಆ. 4ರಂದು ನಗರದ ಎಂ.ಜಿ. ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಕರೆದಿರುವ ಜಿಲ್ಲೆಯ ವಿವಿಧ ಸಂಘಟನೆಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಸಲಹೆ, ಸೂಚನೆ ನೀಡುವಂತೆ ಮನವಿ ಮಾಡಿದರು.
ವೇದಿಕೆ ಸಂಚಾಲಕರಾದ ಮುಬಷೀರ್, ಬಾಳ್ಳು ಗೋಪಾಲ್, ರವಿನಾಕಲಗೂಡು ಇದ್ದರು.

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !