ಭಾನುವಾರ, ಆಗಸ್ಟ್ 14, 2022
25 °C

ಎರಡನೇ ಹಂತ: 5273 ನಾಮಪತ್ರ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ‌: ಎರಡನೇ ಹಂತದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿರುವ ನಾಲ್ಕು ತಾಲ್ಲೂಕುಗಳ ಒಟ್ಟು 1648 ಸದಸ್ಯ ಸ್ಥಾನಗಳಿಗೆ ಬುಧವಾರದ ವರೆಗೆ ಒಟ್ಟು 5273 ನಾಮಪತ್ರಗಳು ಸ್ವೀಕೃತವಾಗಿವೆ.

ಅರಸೀಕೆರೆ ತಾಲ್ಲೂಕಿನ 43 ಗ್ರಾಮ ಪಂಚಾಯಿತಿಗಳ 641 ಸದಸ್ಯ ಸ್ಥಾನಗಳಿಗೆ 1999 ಹಾಗೂ ಬೇಲೂರು ತಾಲ್ಲೂಕಿನ 37 ಗ್ರಾಮ ಪಂಚಾಯಿತಿಗಳ ಒಟ್ಟು 423 ಸ್ಥಾನಗಳಿಗೆ 1334 ನಾಮಪತ್ರ ಸಲ್ಲಿಕೆಯಾಗಿವೆ.

ಆಲೂರು ತಾಲ್ಲೂಕಿನ 14 ಗ್ರಾಮ ಪಂಚಾಯಿತಿಗಳ 192 ಸ್ಥಾನಗಳಿಗೆ 660 ಮಂದಿ ಹಾಗೂ ಹೊಳೆನರಸೀಪುರ ತಾಲ್ಲೂಕಿನ 26 ಗ್ರಾಮ ಪಂಚಾಯಿತಿಗಳ 392 ಸ್ಥಾನಗಳಿಗೆ 1280 ಮಂದಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು