ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2ನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ: ಹಾಸನದಲ್ಲಿ ಶೇ 83 ರಷ್ಟು ಮತದಾನ

ನಾಲ್ಕು ತಾಲ್ಲೂಕುಗಳಲ್ಲಿ ಶಾಂತಿಯುತವಾಗಿ ನಡೆದ ಮತದಾನ
Last Updated 27 ಡಿಸೆಂಬರ್ 2020, 13:33 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯ ನಾಲ್ಕು ತಾಲ್ಲೂಕುಗಳ 120 ಗ್ರಾಮ ಪಂಚಾಯಿತಿಗಳಲ್ಲಿ ಎರಡನೇ ಹಂತದ ಚುನಾವಣೆ ಭಾನುವಾರ ಶಾಂತಿಯುತವಾಗಿ ನಡೆದಿದ್ದು, ಶೇಕಡಾ 83.72ರಷ್ಟು ಮತದನಾವಾಗಿದೆ.

ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನ ಮಂದಗತಿಯಲ್ಲಿ ಸಾಗಿತು. ಮಧ್ಯಾಹ್ನದ ಬಳಿಕ ಬಿರುಸು ಪಡೆಯಿತು. ಬೆಳಿಗ್ಗೆ 7 ರಿಂದ 9ರ ವರೆಗೆ ನಾಲ್ಕು ತಾಲ್ಲುಕುಗಳಿಂದ ಶೇಕಡಾ 9.09ರಷ್ಟು ಮತದಾನವಾದರೆ, ಮಧ್ಯಾಹ್ನ 1 ಗಂಟೆ ವರೆಗೆ ಶೇಕಡಾ 51ರಷ್ಟು ಹಾಗೂ ಮಧ್ಯಾಹ್ನ 3 ಗಂಟೆವರೆಗೆ 68.94 ರಷ್ಟು ಮತದಾನ ವಾಯಿತು.

ಅರಸೀಕೆರೆ, ಬೇಲೂರು, ಆಲೂರು ಹಾಗೂ ಹೊಳೆನರಸೀಪುರ ತಾಲ್ಲೂಕುಗಳ 120 ಗ್ರಾಮ ಪಂಚಾಯಿತಿಗಳಿಂದ 1468 ಸ್ಥಾನಗಳಿಗೆ ಮತದಾನ ನಡೆಯಿತು. ಈಗಾಗಲೇ 178 ಸದಸ್ಯ ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ.

ಎಲ್ಲಾ ಮತಗಟ್ಟೆಗಳಲ್ಲೂ ವೃದ್ಧರು ಹಾಗೂ ಅಂಗವಿಕಲರಿಗೆ ಗಾಲಿ ಕುರ್ಚಿ ವ್ಯವಸ್ಥೆ ಮಾಡಲಾಗಿತ್ತು. ಮಾಸ್ಕ್ ಧರಿಸದೆ ಬಂದವರಿಗೆ ಮತಗಟ್ಟೆ ಪ್ರವೇಶ ನಿಷೇಧಿಸಲಾಗಿತ್ತು. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಥರ್ಮಲ್ ಸ್ಕ್ರೀನಿಂಗ್‌ ಮಾಡಿ ಮತಗಟ್ಟೆ ಒಳಗೆ ಬಿಡುತ್ತಿದ್ದರು.

ಪುರುಷ ಮತ್ತು ಮಹಿಳೆಯರು ಪ್ರತ್ಯೇಕ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ಸೂಕ್ಷ್ಮ ಮತಗಟ್ಟೆಗಳಲ್ಲಿ ಪೊಲೀಸ್‌ ಬಂದೋ ಬಸ್ತ್‌ ಮಾಡಲಾಗಿತ್ತು. ಕೊನೆಯ ಒಂದು ಗಂಟೆ ಕೋವಿಡ್‌ ಪೀಡಿತರು ಪಿಪಿಇ ಕಿಟ್‌ ಧರಿಸಿ ಮತ ಚಲಾವಣೆ ಮಾಡಿದರು.

ಅರಸೀಕೆರೆ ತಾಲ್ಲೂಕಿನ ಬಾಗೇಶಪುರ ಪಂಚಾಯಿತಿಯಲ್ಲಿ ಮೊದಲ ಬಾರಿಗೆ ಮತ ಚಲಾಯಿಸಿದ ಕಾವ್ಯ, ‘ಚುನಾವಣೆಗಳಕುರಿತು ಕೇವಲ ಪಠ್ಯದಲ್ಲಿ ಓದಿದ್ದೆ. ಮೊದಲ ಬಾರಿ ಮತದಾನದಲ್ಲಿ ಭಾಗಿಯಾಗಿರುವುದು ತುಂಬಾ ಖುಷಿ ತಂದಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಯಶಸ್ವಿಯಾಗಬೇಕಾದರೆ ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬರೂ ತಪ್ಪದೇ ಚಲಾಯಿಸಬೇಕು’ ಎಂದು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT