ಹಾಸನ: ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರ ಹಾಗೂ ಅಂಗವಿಕಲ ಕಲ್ಯಾಣ ನಾಗರಿಕರ ಇಲಾಖೆ, ಹಿರಿಯ ನಾಗರಿಕರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಿರಿಯ ನಾಗರಿಕರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಮಂಗಳವಾರ ಇಲ್ಲಿನ ಹಾಸನಾಂಬ ಕಲಾಕ್ಷೇತ್ರದ ಆವರಣದಲ್ಲಿ ಆಯೋಜಿಸಲಾಗಿತ್ತು.

60-69 ವರ್ಷ ಹಾಗೂ 70 ಮೇಲ್ಪಟ್ಟವರಿಗೆ ಗಾಯನ ಸ್ಪರ್ಧೆ (ಜಾನಪದ ಗೀತೆ), ಏಕಪಾತ್ರ ಅಭಿನಯ, 60-69 ವರ್ಷದವರಿಗೆ ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ, 70 ವರ್ಷ ಮೇಲಿನವರಿಗೆ ಬಿರುಸಿನ ನಡಿಗೆ, ಬಕೆಟ್ನಲ್ಲಿ ಬಾಲ್ ಎಸೆಯುವುದು ಸೇರಿದಂತೆ ವಯೋಮಿತಿ ಆಧಾರದ ಮೇಲೆ ಸ್ಪರ್ಧೆ ಏರ್ಪಡಿಸಲಾಗಿತ್ತು. ಹಿರಿಯ ನಾಗರಿಕರು ಉತ್ಸಾಹದಿಂದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಗಮನ ಸೆಳೆದರು.

ಜಿಲ್ಲಾ ಹಿರಿಯ ನಾಗರಿಕರ ಮತ್ತು ಅಂಗವಿಕಲರ ಕಲ್ಯಾಣಾಧಿಕಾರಿ ಅನುಪಮಾ ಮಾತನಾಡಿ, ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಪೂರ್ವಭಾವಿಯಾಗಿ ಈ ಕ್ರೀಡಾ ಚಟುವಟಿಕೆ ಆಯೋಜಿಸಲಾಗಿದ್ದು, ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ಕ್ರೀಡಾ ಚಟುವಟಿಕೆ ನಡೆಸಲಾಗುತ್ತಿದೆ ಎಂದರು.

ಈ ಬಾರಿ ಎರಡೂ ವಯೋಮಾನದ ಹಿರಿಯ ನಾಗರಿಕರಿಗೆ ಪ್ರತ್ಯೇಕವಾಗಿ ಕ್ರೀಡಾ ಚಟುವಟಿಕೆ ನಡೆಸಲಾಗುತ್ತಿದ್ದು, 60 ರಿಂದ 69 ವರ್ಷ ಮತ್ತು 70 ವರ್ಷದ ನಂತರದ ಹಿರಿಯ ನಾಗರಿಕರಿಗೆ ಕ್ರೀಡಾ ಚಟುವಟಿಕೆ ನಡೆಸಲಾಗುತ್ತಿದೆ. ವಿಜೇತರಾದ ಹಿರಿಯರಿಗೆ, ಹಿರಿಯ ನಾಗರಿಕರ ದಿನಾಚರಣೆಯಂದು ಬಹುಮಾನ ವಿತರಿಸಲಾಗುವುದು ಎಂದರು.

ಸುಮಾರು 300ಕ್ಕೂ ಹೆಚ್ಚು ಮಂದಿ ಹಿರಿಯ ನಾಗರಿಕರು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಈಗಾಗಲೇ ಕೆಲವು ಕ್ರೀಡಾ ಚಟುವಟಿಕೆಗಳು ಜರುಗಿವೆ. ಮಧ್ಯಾಹ್ನದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.