ಕಾರ್ಮಿಕರಿಗೆ ವಿಶ್ರಾಂತಿ ನೀಡಲು ಸೂಚನೆ
ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು ಕಟ್ಟಡ ಕಾಮಗಾರಿ ಸ್ಥಳಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಜಿಲ್ಲೆಯ ಪ್ರತಿ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಟ್ಟಡ ಕಾರ್ಮಿಕರುಗಳಿಗೆ ಮಧ್ಯಾಹ್ನ 1 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿಶ್ರಾಂತಿ ನೀಡುವಂತೆ ಕಾರ್ಮಿಕ ಅಧಿಕಾರಿ ಯಮುನಾ ತಿಳಿಸಿದ್ದಾರೆ. ಕೆಲಸದಲ್ಲಿ ತೊಡಗಿರುವ ಎಲ್ಲ ಕಾರ್ಮಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಶೌಚಾಲಯ ವ್ಯವಸ್ಥೆ ಮತ್ತು ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡುವುದು ಗುತ್ತಿಗೆದಾರರು ಮಾಲೀಕರ ಜವಾಬ್ದಾರಿ. ಯಾವುದೇ ಅಹಿತಕರ ಘಟನೆಗಳು ನಡೆದಲ್ಲಿ ಸಂಬಂಧಿಸಿದ ಗುತ್ತಿಗೆದಾರರು ಮಾಲೀಕರೇ ಹೊಣೆಗಾರರು ಎಂದು ತಿಳಿಸಿದ್ದಾರೆ.