ಹಾಸನ: ವಕೀಲ, ಬಿಜೆಪಿ ಮುಖಂಡ ಜಿ. ದೇವರಾಜೇಗೌಡ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ್ದು, ಈಗ ಪ್ರಕರಣದ ವಿವರಗಳು ಬಹಿರಂಗವಾಗುತ್ತಿವೆ.

‘ನಿವೇಶನವನ್ನು ಮಾರಿಸಿಕೊಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂದು ಏಪ್ರಿಲ್ 1 ರಂದು ಹೊಳೆನರಸೀಪುರ ನಗರ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

‘ಹೆದರಿಸಿ, ಬೆದರಿಸಿ ನನ್ನ ಮೇಲೆ ದೌರ್ಜನ್ಯ ನಡೆಸಲಾಗಿದೆ. ವಿಡಿಯೊ ಕಾಲ್ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ’ ಎಂದು ಆರೋಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ದೇವರಾಜೇಗೌಡ, ಹಾಸನದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಮೇ 8 ರಂದು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯವು ವಿಚಾರಣೆಯನ್ನು ಮೇ 15ಕ್ಕೆ ಮುಂದೂಡಿದೆ.

ಈ ಮಧ್ಯೆ ದೇವರಾಜೇಗೌಡರು, ಮಹಿಳೆ ಹಾಗೂ ಆಕೆಯ ಪತಿ ವಿರುದ್ಧ ಹನಿ ಟ್ರ್ಯಾಪ್ ಆರೋಪದಲ್ಲಿ ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.