ಹಾಸನ: ‘ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಭಾರಿ ಉಪ ನಿರ್ದೇಶಕ ದಿಲೀಪ್ ಅವರು ಲೈಂಗಿಕ ಕಿರುಕುಳ
ನೀಡುತ್ತಿದ್ದಾರೆ’ ಎಂದು ಆರೋಪಿಸಿರುವ ತಾಲ್ಲೂಕು ಶಿಶು ಅಭಿವೃದ್ಧಿ ಅಧಿಕಾರಿ, ಈ ಸಂಬಂಧ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

‘ಐದಾರು ತಿಂಗಳಿಂದ ಅವರ ಹಿಂಸೆ ಸಹಿಸಿಕೊಂಡು ಸುಮ್ಮನಿದ್ದೆ. ಆದರೆ, ಪರಿಸ್ಥಿತಿ ಕೈ ಮೀರಿದ್ದರಿಂದ ಮಾಧ್ಯಮಗಳ ಎದುರು ಬಂದಿದ್ದೇನೆ. ನನಗೆ ಆಗಿರುವ ಅನ್ಯಾಯ ಬೇರೆ ಹೆಣ್ಣು ಮಕ್ಕಳಿಗೆ ಆಗಬಾರದು. ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಠಾಣೆಯಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದೇನೆ’ಎಂದು ಶುಕ್ರವಾರ ತಿಳಿಸಿದರು.

‘ಜುಲೈ 18ರ ರಾತ್ರಿ ಸುಮಾರು 50 ಬಾರಿ ಕರೆ ಮಾಡಿ ಅಧಿಕಾರಿ ತೊಂದರೆ ನೀಡಿದ್ದಾರೆ. ಗುಟ್ಟಾಗಿ ಏನೋ ಮಾತಾಡಬೇಕು, ಈಗಲೇ ಬರಬೇಕು ಎಂದು ಹೇಳುತ್ತಾರೆ. ನನಗೆ ದೃಷ್ಟಿ ದೋಷವಿದ್ದು, ಅಂಗವಿಕಲತೆಯ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ನಾಲ್ಕು ದಿನ ನನಗೆ ಸಹಕಾರ ನೀಡದಿದ್ದರೆ ಒಂದು ಗತಿ ಕಾಣಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಇಲಾಖಾ ಮೇಲಧಿಕಾರಿಗಳ ಗಮನಕ್ಕೆ ತಂದಿದ್ದೇನೆ’ಎಂದು ಅಳಲು ತೋಡಿಕೊಂಡರು.

ಪ್ರತಿಕ್ರಿಯೆಗೆ ದಿಲೀಪ್ ಅವರನ್ನು ‘ಪ್ರಜಾವಾಣಿ’ ಸಂಪರ್ಕಿಸಿದಾಗ ಕರೆ ಸ್ವೀಕರಿಸಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.