ಸೆ.5ರಿಂದ ಶಿರಾಡಿ ಘಾಟ್‌ ರಸ್ತೆ ಸಂಚಾರ

7

ಸೆ.5ರಿಂದ ಶಿರಾಡಿ ಘಾಟ್‌ ರಸ್ತೆ ಸಂಚಾರ

Published:
Updated:

ಹಾಸನ: 'ಭೂ ಕುಸಿತದಿಂದ ಬಂದ್ ಆಗಿರುವ ಹಾಸನ, ಮಂಗಳೂರು ನಡುವಿನ ಶಿರಾಡಿಘಾಟ್ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಸೆ. 5ರ ಮಧ್ಯಾಹ್ನದಿಂದ ಅವಕಾಶ ಕಲ್ಪಿಸಲಾಗುವುದು' ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು.

‘ಸತತ ಮಳೆಯಿಂದ ಹಲವು ಕಡೆ ಭೂ ಕುಸಿತ, ಗುಡ್ಡ ಕುಸಿದು ರಸ್ತೆಗಳು ಹಾಳಾಗಿವೆ. ತುರ್ತು ದುರಸ್ತಿ ಕಾರ್ಯ ನಡೆದಿದೆ. ಪರಿಣತರ ಸೂಚನೆ ಮೇರೆಗೆ ಲಘು ವಾಹನಗಳು ಸಂಚರಿಸಬಹುದು ಎಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಪತ್ರ ಬರೆದಿದ್ದಾರೆ. ಈ ಪತ್ರದ ಆಧಾರದ ಮೇಲೆ ಸಂಚಾರಕ್ಕೆ ಮುಕ್ತಗೊಳಿಸುವ ನಿರ್ಧಾರಕ್ಕೆ ಬರಲಾಗಿದೆ. ಈ ಬಗ್ಗೆ ಮಂಗಳೂರು ಜಿಲ್ಲಾಧಿಕಾರಿ ಜತೆ ಚರ್ಚಿಸಿ ಮಧ್ಯಾಹ್ನದ ಬಳಿಕ ಆದೇಶ ಹೊರಡಿಸಲಾಗುವುದು. ಸಂಚಾರದ ವೇಳೆ ಯಾವುದೇ ಅನಾಹುತ ಸಂಭವಿಸಿದರೂ ಅದಕ್ಕೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೇ ಹೊಣೆ’ ಎಂದು ರೋಹಿಣಿ ಎಚ್ಚರಿಸಿದರು.

ಬರಹ ಇಷ್ಟವಾಯಿತೆ?

  • 3

    Happy
  • 0

    Amused
  • 0

    Sad
  • 0

    Frustrated
  • 1

    Angry

Comments:

0 comments

Write the first review for this !