ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾಡಿಘಾಟ್‌ ಸಂಚಾರ ಅಬಾಧಿತ; ಭೂಕುಸಿತ ಸ್ಥಳಗಳಲ್ಲಿ ತಡೆಗೋಡೆ ನಿರ್ಮಾಣ: ಡಿ.ಸಿ

Last Updated 10 ಮೇ 2019, 11:52 IST
ಅಕ್ಷರ ಗಾತ್ರ

ಹಾಸನ: ಈ ಬಾರಿ ಜೋರು ಮಳೆಯಾದರೂ ಬೆಂಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಶಿರಾಡಿಘಾಟ್ ಸಂಚಾರ ಅಬಾಧಿತ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಸ್ಪಷ್ಟಪಡಿಸಿದರು.

ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದರೆ, ಅದನ್ನು ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ ಒಳಾಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜ್ ಕುಮಾರ್ ಕತ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಜಿಲ್ಲಾಧಿಕಾರಿ ಸೇರಿದಂತೆ ಪ್ರಮುಖ ಅಧಿಕಾರಿಗಳ ಸಭೆ ನಡೆಸಿ, ಯಾವ ರೀತಿ ಸನ್ನದ್ಧರಾಗಿರಬೇಕು ಎಂದು ಸೂಚಿಸಿದರು.

ಸಭೆ ಬಳಿಕ ಮಾತನಾಡಿದ ಪ್ರಿಯಾಂಕ, ಕಳೆದ ವರ್ಷ ಭೂ ಕುಸಿತವಾಗಿದ್ದ ಸ್ಥಳಗಳಲ್ಲಿ ಸೂಕ್ತ ತಡೆಗೋಡೆ ನಿರ್ಮಿಸಿ ಬಂದೋಬಸ್ತ್ ಮಾಡಲಾಗಿದೆ. ಎಂಥಾ ಪರಿಸ್ಥಿತಿ ಎದುರಾದರೂ ಸಮರ್ಪಕವಾಗಿ ಎದುರಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.

ಕಳೆದ ವರ್ಷ ಆಗಸ್ಟ್-ಸೆಪ್ಟಂಬರ್ ನಲ್ಲಿ ಸುರಿದ ಮಹಾಮಳೆಗೆ ಎಲ್ಲೆಂದರಲ್ಲಿ ಭೂ ಕುಸಿತ ಉಂಟಾಗಿ ತಿಂಗಳುಗಟ್ಟಲೆ ಶಿರಾಡಿ ಘಾಟ್ ಬಂದ್ ಆಗಿತ್ತು. ಹಾಸನ-ಕರಾವಳಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಕಡಿತವಾಗಿತ್ತು. ಪ್ರಮುಖವಾಗಿ ರೈಲು ಸಂಚಾರವೂ ಸ್ಥಗಿತವಾಗಿತ್ತು. ಸೇತುವೆ, ಬೆಳೆಹಾನಿ ಸೇರಿದಂತೆ ಒಟ್ಟಾರೆಯಾಗಿ ₹ 300 ಕೋಟಿಗೂ ಅಧಿಕ ನಷ್ಟ ಸಂಭವಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT