ಬುಧವಾರ, ಸೆಪ್ಟೆಂಬರ್ 22, 2021
25 °C
ಭೂ ಕುಸಿತ

ಶಿರಾಡಿ ಘಾಟ್‌: ವಾಹನ ಸಂಚಾರ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂ ಕುಸಿತ ಉಂಟಾಗಿರುವುದರಿಂದ  ಮಾರನಹಳ್ಳಿಯಿಂದ ದೋಣಿಗಾಲ್‍ವರೆಗಿನ ರಸ್ತೆಯಲ್ಲಿ ಮುಂದಿನ ಆದೇಶದವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಿ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶ ಹೊರಡಿಸಿದ್ದಾರೆ.

ಕಾರುಗಳು, ಜೀಪು, ಟೆಂಪೋ, ಮಿನಿ ವ್ಯಾನ್, ದ್ವಿಚಕ್ರ ವಾಹನಗಳು, ಆಂಬುಲೆನ್ಸ್, ಸಾರ್ವಜನಿಕರು ಸಂಚರಿಸುವ ಬಸ್‍ಗಳು, ಆರು ಚಕ್ರದ ಸರಕು ಸಾಗಣೆಯ (ಗುಂಪು ಎ) ಲಘು ವಾಹನಗಳು ಹಾಸನ, ಬೇಲೂರು, ಮೂಡಿಗೆರೆ, ಚಾರ್ಮಾಡಿ ಘಾಟ್ ಮಾರ್ಗದ ಮೂಲಕ ಮಂಗಳೂರು ತಲುಪುಬಹುದು.

ರಾಜಹಂಸ, ಐರಾವತ, ಬುಲೆಟ್ ಟ್ಯಾಂಕರ್ ಶಿಫ್ಟ್ ಕಾಗ್ರೋ, ಕಂಟೈನರ್ಸ್, ಮಲ್ಟಿ ಎಕ್ಸೆಲ್ ಟ್ರಕ್ ಟ್ರೈಲರ್ ಮತ್ತು ಎಲ್ಲಾ ಬಗೆಯ ಅಧಿಕ ಭಾರದ ಸರಕು ಸಾಗಣೆ (ಗುಂಪು ಬಿ) ವಾಹನಗಳು ಹಾಸನ- ಅರಕಲಗೂಡು-ಕುಶಾಲನಗರ-ಸಂಪಾಜೆ ಮಾರ್ಗದ ಮೂಲಕ ಮಂಗಳೂರು ತಲುಪಲು ವ್ಯವಸ್ಥೆ ಮಾಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.