ಬುಧವಾರ, ಸೆಪ್ಟೆಂಬರ್ 22, 2021
21 °C

ಹಾಸನ: ಶಿರಾಡಿ ರಸ್ತೆ ಲಘು ವಾಹನಗಳಿಗೆ ಮುಕ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ ರಸ್ತೆಯಲ್ಲಿ ಹಗಲು ವೇಳೆ ಕಾರು, ಜೀಪು, ಟೆಂಪೋ, ದ್ವಿಚಕ್ರ ವಾಹನ, ಸಾರಿಗೆ ಬಸ್‌, ಆಂಬುಲೆನ್ಸ್‌, 20 ಟನ್‌ ಸಾಮರ್ಥ್ಯದ ಲಾರಿಗಳ ಸಂಚಾರಕ್ಕೆ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅನುಮತಿ ನೀಡಿದ್ದಾರೆ. ಟ್ಯಾಂಕರ್‌, ಕಾರ್ಗೋ ಕಂಟೇನರ್‌ ಸೇರಿದಂತೆ ಭಾರಿ ಗಾತ್ರದ ವಾಹನಗಳ ಸಂಚಾರ ನಿಷೇಧಿಸಲಾಗಿದೆ. 

ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ದೋಣಿಗಾಲ್‌ ಬಳಿ ಭೂ ಕುಸಿತ ಉಂಟಾಗಿ, ಶಿರಾಡಿ ಘಾಟ್‌ ರಸ್ತೆಯನ್ನು ಸಂಚಾರ ಬಂದ್‌ ಮಾಡಲಾಗಿತ್ತು. ರಸ್ತೆ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು