ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಲಿಂಗೇಗೌಡರಿಂದ ಕುರುಕ್ಷೇತ್ರ ನಾಟಕದ ಡೈಲಾಗ್‌

Last Updated 28 ಮಾರ್ಚ್ 2023, 8:55 IST
ಅಕ್ಷರ ಗಾತ್ರ

ಹಾಸನ: ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರು ನಾಟಕದ ಡೈಲಾಗ್‌ ಹೇಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಅರಸೀಕೆರೆ ತಾಲ್ಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ಕುರುಕ್ಷೇತ್ರ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಉದ್ಘಾಟನೆಯ ಸಂದರ್ಭದಲ್ಲಿ ಕೈಯಲ್ಲಿ ಗದೆ ಹಿಡಿದು, ಕುರುಕ್ಷೇತ್ರ ನಾಟಕದ ಡೈಲಾಗ್‌ಗಳನ್ನು ಹೇಳುವ ಮೂಲಕ ಶಾಸಕ ಕೆ.ಎಂ. ಶಿವಲಿಂಗೇಗೌಡ, ಸಭಿಕರಿಂದ ಮೆಚ್ಚುಗೆ ಪಡೆದರು.

ಶಿವಲಿಂಗೇಗೌಡರ ಡೈಲಾಗ್‌ಗಳನ್ನು ಕೇಳಿದ ಪ್ರೇಕ್ಷಕರು, ಸಿಳ್ಳೆ ಹೊಡೆದು, ಚಪ್ಪಾಳೆ ಬಾರಿಸುವ ಮೂಲಕ ಹರ್ಷ ವ್ಯಕ್ತಪಡಿಸಿದರು.
ಜೆಡಿಎಸ್‌ನಿಂದ ಆಯ್ಕೆಯಾಗಿರುವ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ, ಇದೀಗ ಪಕ್ಷದಿಂದ ಹೊರನಡೆದಿದ್ದು, ಕಾಂಗ್ರೆಸ್‌ ಸೇರ್ಪಡೆಗೆ ಸಿದ್ಧರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT