ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ | ಹಳ್ಳದ ರಾಮೇಶ್ವರ ದೇಗುಲದಲ್ಲಿ ಶಿವರಾತ್ರಿ

Published 7 ಮಾರ್ಚ್ 2024, 14:11 IST
Last Updated 7 ಮಾರ್ಚ್ 2024, 14:11 IST
ಅಕ್ಷರ ಗಾತ್ರ

ಹಾಸನ: ನಗರದ ತಣ್ಣೀರುಹಳ್ಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆಯ ಆವರಣದಲ್ಲಿರುವ ಹಳ್ಳದ ರಾಮೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಆಚರಣೆ ಆಯೋಜಿಸಲಾಗಿದೆ.

ಮಾರ್ಚ್ 8 ರಂದು ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 9 ರಂದು ಬೆಳಿಗ್ಗೆ 7 ಗಂಟೆಯವರೆಗೆ ಹಳ್ಳದ ರಾಮೇಶ್ವರ ಸ್ವಾಮಿಯ ದರ್ಶನಕ್ಕೆ ಅವಕಾಶವಿರುತ್ತದೆ. ವಿವಿಧ ಪೂಜೆಗಳು ನಿರಂತರವಾಗಿ ಜರುಗಲಿವೆ.

ಮಾ. 8ರಂದು ಸಂಜೆ 7 ಗಂಟೆಗೆ ನಡೆಯುವ ಧಾರ್ಮಿಕ ಸಭೆಯಲ್ಲಿ ಅರಕಲಗೂಡು ತಾಲ್ಲೂಕು ಕೊಣನೂರು ಹೋಬಳಿಯ ಕೆಸವತ್ತೂರು ಗ್ರಾಮದ ಸಿದ್ಧಲಿಂಗೇಶ್ವರ ವಿರಕ್ತಮಠದ ಬಸವರಾಜೇಂದ್ರ ಸ್ವಾಮೀಜಿ ಪ್ರವಚನ ನೀಡುವರು. ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಹಾಗೂ ಜಿಲ್ಲೆಯ ಕಲಾವಿದರಿಂದ ಭಕ್ತಿಪ್ರಧಾನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಹಾಸನ ಹಾಗೂ ಸುತ್ತಲಿನ ಭಕ್ತರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಹಳ್ಳದ ರಾಮೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕು ಎಂದು ಎಸ್‌ಡಿಎಂ ಸಂಸ್ಥೆಯ ಪ್ರಾಂಶುಪಾಲ ಡಾ.ಪ್ರಸನ್ನ ನರಸಿಂಹ ರಾವ್, ಉಪ ಪ್ರಾಂಶುಪಾಲೆ ಡಾ.ಶೈಲಜಾ ಯು., ಕಾರ್ಯಕ್ರಮದ ಮುಖ್ಯ ಸಂಯೋಜಕ ಡಾ.ಅಶ್ವಿನಿಕುಮಾರ್ ಎಂ. ಕೋರಿದ್ದಾರೆ. ವಿವರಗಳಿಗಾಗಿ 9448227115 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT