ಶ್ರವಣಬೆಳಗೊಳ: ಕ್ರೀಡೆಗಳಲ್ಲಿ ಆಸಕ್ತಿಯಿಂದ ಭಾಗವಹಿಸುವುದರಿಂದ ಆಯಾಯ ಪ್ರದೇಶದ ಸಂಸ್ಕೃತಿಗಳ ಪರಿಚಯದೊಂದಿಗೆ ಒಳ್ಳೆಯ ಬಾಂಧವ್ಯ ಬೆಳೆಯಲು ಸಹಕಾರಿಯಾಗುತ್ತದೆ ಎಂದು ಕಾಂಗ್ರೆಸ್ ನಾಯಕಿ ಲಾವಣ್ಯ ಬಲ್ಲಾಳ್ ಹೇಳಿದರು.

ಗೊಮ್ಮಟ ನಗರದ ಬಾಹುಬಲಿ ತಾಂತ್ರಿಕ ಮಹಾವಿದ್ಯಾಲಯದ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಬಾಹುಬಲಿ ಜೈನ್ ಪ್ರೀಮಿಯರ್ ಲೀಗ್ ಕ್ರಿಕೆಟ್ನ ಸಮಾರೋಪ ಸಮಾರಂಭದಲ್ಲಿ ಬಹುಮಾನ ಟ್ರೋಫಿ ವಿತರಿಸಿ ಅವರು ಭಾನುವಾರ ಮಾತನಾಡಿದರು. ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ಸುಧಾರಿಸುತ್ತದೆ ಎಂದು ಹೇಳಿದರು.

ಆಯೋಜಕರಾದ ಕ್ರೀಡಾ ಮೇಲ್ವಿಚಾರಕ ಶ್ರೇಯಸ್ ಜೈನ್ ಮಾತನಾಡಿ, ರಾಜ್ಯದ ವಿವಿಧ ಜಿಲ್ಲೆಗಳ 15 ತಂಡಗಳು ಭಾಗವಹಿಸಿದ್ದವು ಎಂದರು. 2 ದಿನಗಳ ಕಾಲ ಜರುಗಿದ ಪಂದ್ಯ ಲೀಗ್ ಆಧಾರದಲ್ಲಿ ನಡೆದಿದ್ದು, ದಕ್ಷಿಣ ಕನ್ನಡದ ಅತಿಶಯ ನಲ್ಲೂರು ತಂಡ ಪ್ರಥಮ ಬಹುಮಾನ ₹58 ಸಾವಿರ ನಗದು ಮತ್ತು ಟ್ರೋಫಿ, ದ್ವಿತೀಯ ಸ್ಥಾನ ಉಜಿರೆಯ ಸೌಹಾರ್ದ ಕ್ರಿಕೆಟರ್ ತಂಡ ₹ 30 ಸಾವಿರ ನಗದು ಮತ್ತು ಟ್ರೋಫಿ, ತೃತೀಯ ಸ್ಥಾನ ತುಮಕೂರಿನ ಆದಿನಾಥ ಕ್ರಿಕೆಟರ್ ತಂಡ ₹20 ಸಾವಿರ ನಗದು ಮತ್ತು ಟ್ರೋಫಿ ಗಳಿಸಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಿ.ಸುನೀಲ್ ಕುಮಾರ್, ಕಾರ್ಯದರ್ಶಿ ಬಬನ್ ಪಿ ದತ್ತವಾಡೆ, ಆಡಳಿತ ಮಂಡಳಿಯ ಸದಸ್ಯರಾದ ಎಸ್.ವಿ.ಭರತೇಶ್, ಪೌದನ್ ಕುಮಾರ್, ರಾಜೇಶ್, ನೇಮೀಶ್, ಪ್ರದೀಪ್ ಹೆಗಡೆ ದಯಾನಂದ್, ಹೇಮಂತ್ ಕುಮಾರ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-36-598276083

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.